ತೃತೀಯರಂಗದ ಬಲವರ್ಧನೆಗೆ ಸಂಬಂಧಿಸಿದಂತೆ ಸಿಪಿಐ(ಎಂ)ನ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ಗುರುವಾರದಂದು ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ದೇವೇಗೌಡರನ್ನು ಭೇಟಿಯಾಗಿ ಮಾತುಕತೆ ನಡೆಸಿದರು.
ನವದೆಹಲಿಯಲ್ಲಿರುವ ದೇವೇಗೌಡರ ನಿವಾಸಕ್ಕೆ ಭೇಟಿ ನೀಡಿದ ಕಾರಟ್, ಅಣು ಒಪ್ಪಂದದ ವಿಷಯದಲ್ಲಿ ಕಾಂಗ್ರೆಸ್‌ನಿಂದ ದೂರ ಸರಿದಿರುವ ಎಡಪಕ್ಷಗಳು ಮುಂದಿನ ಲೋಕಸಭಾ ಚುನಾವಣೆಯಲ್ಲಿ ತೃತೀಯರಂಗವನ್ನು ಬಲಗೊಳಿಸಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಿರುವುದಾಗಿ ಅವರು ಹೇಳಿದ್ದಾರೆ.
ದೇವೇಗೌಡರ ಅವರನ್ನು ಭೇಟಿಯಾಗಿ ಮಹತ್ವದ ರಾಜಕೀಯ ವಿದ್ಯಮಾನದ ಕುರಿತು ಚರ್ಚೆ ನಡೆಸಿದ್ದು, ಮುಂದಿನ ಚುನಾವಣೆ ಕುರಿತು ಮಾತುಕತೆ ನಡೆಸಲಾಯಿತು ಎಂದು ಅವರು ಹೇಳಿದರು.
|