ಜಮ್ಮು ಮತ್ತು ಕಾಶ್ಮೀರದಲ್ಲಿ ಉದ್ವಿಗ್ನತೆಯು ತಾರಕಕ್ಕೇರಿರುವಂತೆಯೇ, ಶುಕ್ರವಾರ ರಾತ್ರಿ ಕಾಂಗ್ರೆಸ್‌ನ ಉನ್ನತ ಮಟ್ಟದ ಸಭೆಯು ಅಲ್ಲಿನ ಪರಿಸ್ಥಿತಿಯ ಕುರಿತು ವಿಮರ್ಷೆ ನಡೆಸಿತು.
ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ಮತ್ತು ಇದಕ್ಕೆ ಪರಿಹಾರ ಕಂಡುಕೊಳ್ಳುವ ಬಗ್ಗೆ ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಗುಲಾಂ ನಬಿ ಅಜಾದ್ ಮತ್ತು ಪಿಸಿಸಿ ಅಧ್ಯಕ್ಷ ಸೈಫುದ್ದೀನ್ ಸೋಜ್ ಅವರೊಂದಿಗೆ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ ಚರ್ಚೆ ನಡೆಸಿದರು.
ಕಾಂಗ್ರೆಸ್‌ನ ರಾಜಕೀಯ ಸಲಹಾಗಾರದ ಅಧ್ಯಕ್ಷ ಅಹ್ಮದ್ ಪಟೇಲ್ ಅವರೂ ಈ ಸಭೆಯಲ್ಲಿ ಉಪಸ್ಥಿತರಿದ್ದರು. ಅಮರನಾಥ್ ದೇವಾಲಯಕ್ಕೆ ಜಮೀನು ಹಸ್ತಾಂತರ ಮಾಡುವ ಕುರಿತ ಸಂಘರ್ಷದ ನಡುವೆ ಈ ಸಭೆಯನ್ನು ನಡೆಸಲಾಯಿತು.
ಈ ನಡುವೆ, ಅಮರನಾಥ್ ವಿವಾದದ ಕುರಿತಾದ ಗಡಿ ರಾಜ್ಯದಲ್ಲಿನ ಪರಿಸ್ಥಿತಿಯ ಬಗ್ಗೆ ತನ್ನ ಸ್ವಾತಂತ್ರ್ಯ ದಿನಾಚರಣೆಯ ಭಾಷಣದಲ್ಲಿ ಆತಂಕ ವ್ಯಕ್ತಪಡಿಸಿದ್ದ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಈ ವಿವಾದದ ಕುರಿತಾದ ರಾಜಕೀಯ ವಿಭಜನೆಯನ್ನು ಬಲವಾಗಿ ವಿರೋಧಿಸಿದ್ದಾರೆ.
|