ಜೈಪುರ ಸರಣಿ ಬಾಂಬ್ ಸ್ಫೋಟದಲ್ಲಿ ಸಂಬಂಧ ಹೊಂದಿರುವ ಆರೋಪದಲ್ಲಿ ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳನ್ನು ಸೋಮವಾರ ವಿಚಾರಣೆಗೊಳಪಡಿಸಲಾಗಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳಲ್ಲಿ ಒಬ್ಬ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸ್(ಎಐಐಎಂಎಸ್)ಗೆ ಸೇರಿದವನಾಗಿದ್ದಾನೆ.
ಜೈಪುರ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿ ಬರನ್ ಜಿಲ್ಲೆಯಲ್ಲಿ ಮೂವರನ್ನು ಪೊಲೀಸರು ಬಂಧಿಸಿದ ಬೆನ್ನಲ್ಲೇ ಈ ಇಬ್ಬರ ವಿಚಾರಣೆ ನಡೆದಿದೆ.
ಅಹಮದಾಬಾದ್ ಸ್ಫೋಟದಲ್ಲಿ ಭಾಗಿಯಾಗಿರುವ ಆರೋಪದಲ್ಲಿ ಬಂಧಿತರಾದವರು ನೀಡಿದ ಸುಳಿವಿನ ಆಧಾರದಲ್ಲಿ ಪೊಲೀಸರು ಇಬ್ಬರು ವೈದ್ಯಕೀಯ ವಿದ್ಯಾರ್ಥಿಗಳ ವಿಚಾರಣೆ ನಡೆಸಿದ್ದಾರೆ ಎಂದು ಅಧಿಕೃತ ಮೂಲಗಳು ಹೇಳಿವೆ.
ಜೈಪುರ್ ಮತ್ತು ಇತರ ಸ್ಥಳಗಳಲ್ಲಿನ ಬಾಂಬ್ ಸ್ಫೋಟದಲ್ಲಿ ನೇರವಾಗಿ ಅಥವಾ ಪರೋಕ್ಷವಾಗಿ ಇವರ ಕೈವಾಡದ ಕುರಿತಾಗಿ ಈ ವಿದ್ಯಾರ್ಥಿಗನ್ನುಳ ಇನ್ನಷ್ಟು ವಿಚಾರಣೆಗೆ ಒಳಪಡಿಸಲಾಗುತ್ತಿದೆ ಎಂದು ಮೂಲಗಳು ಹೇಳಿವೆ.
|