ರಾಜ್ಯದಲ್ಲಿ ಕೆಲ ದಿನಗಳ ಕಾಲ ತಲೆದೋರಿದ್ದ ರಾಜಕೀಯ ಬಿಕ್ಕಟ್ಟಿನ ನಂತರ ಜಾರ್ಖಂಡ್ ಮುಕ್ತಿ ಮೋರ್ಚಾದ ವರಿಷ್ಟ ಶಿಬಿ ಸೊರೆನ್ ಅಂತಿಮವಾಗಿ ಮುಖ್ಯಮಂತ್ರಿಯಾಗಿ ಬುಧವಾರ ಸಂಜೆ ಪ್ರಮಾಣ ವಚನ ಸ್ವೀಕರಿಸಿದರು
ಸೊರೆನ್ ಅವರನ್ನು ಸರಕಾರ ರಚಿಸುವಂತೆ ರಾಜ್ಯಪಾಲ ಸಯ್ಯದ್ ಸಿಬ್ತೆ ರಝಿ ಅಹ್ವಾನಿಸಿರುವ ಹಿನ್ನೆಲೆಯಲ್ಲಿ ಶಿಬು ಅವರು ಮುಖ್ಯಮಂತ್ರಿಯಾಗಿ ಪ್ರಮಾಣವಚನ ಸ್ವೀಕರಿಸುವುದಾಗಿ ರಾಜಭವನದ ಮೂಲಗಳು ತಿಳಿಸಿವೆ.
ಇತ್ತಿಚೆಗೆ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಿದ ಮಧು ಕೋಡಾ ಬೆಂಬಲದಿಂದಾಗಿ ಜಾರ್ಖಂಡ್ ಮುಕ್ತಿ ಮೋರ್ಚಾದ ಮುಖ್ಯಸ್ಥ ಶಿಬು ಸೋರೆನ್ ಸರಕಾರ ರಚಿಸಲು ಅಗತ್ಯವಾದ ಬಹುಮತವನ್ನು ಪಡೆದ ಹಿನ್ನೆಲೆಯಲ್ಲಿ ಸರಕಾರ ರಚಿಸುವಂತೆ ಅಹ್ವಾನ ನೀಡಲಾಗಿತ್ತು.
|