ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಪುದುಚೇರಿ ಸಿಎಂ ರಂಗಸ್ವಾಮಿ ರಾಜೀನಾಮೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಪುದುಚೇರಿ ಸಿಎಂ ರಂಗಸ್ವಾಮಿ ರಾಜೀನಾಮೆ
ಕಳೆದ ಒಂದು ತಿಂಗಳಿನಿಂದ ತಮ್ಮ ನಾಯಕತ್ವದ ವಿರುದ್ಧ ಭುಗಿಲೆದ್ದ ಸಂಪುಟ ಸಹೊದ್ಯೋಗಿಗಳ ಭಿನ್ನಮತದ ಹಿನ್ನೆಲೆಯಲ್ಲಿ ಪುದುಚೇರಿ ಮುಖ್ಯಮಂತ್ರಿ ಎನ್. ರಂಗಸ್ವಾಮಿ ತನ್ನ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.

ಕಾಂಗ್ರೆಸ್ ಹೈಕಮಾಂಡ್ ಆದೇಶದ ಮೇರೆಗೆ ಮುಖ್ಯಮಂತ್ರಿ ಎನ್. ರಂಗಸ್ವಾಮಿ, ರಾಜ್ಯಪಾಲ ಗೋವಿಂದ್ ಸಿಂಗ್ ಗುರ್ಜರ್ ಅವರನ್ನು ರಾಜಭವನದಲ್ಲಿ ಭೇಟಿ ಮಾಡಿ ರಾಜೀನಾಮೆ ಪತ್ರವನ್ನು ಸಲ್ಲಿಸಿದ್ದಾರೆ.

ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ರಾಜ್ಯಪಾಲ ಗುರ್ಜರ್, "ಮುಖ್ಯಮಂತ್ರಿ ರಂಗಸ್ವಾಮಿ ತಮ್ಮ ಸಂಪುಟದ ಸಚಿವರೊಂದಿಗೆ ರಾಜೀನಾಮೆಯನ್ನು ಸಲ್ಲಿಸಿದ್ದಾರೆ. ಪಕ್ಷದ ಅಧ್ಯಕ್ಷರು ಪರ್ಯಾಯ ವ್ಯವಸ್ಥೆ ಮಾಡುವವರೆಗೆ ತಮ್ಮ ಹುದ್ದೆಯಲ್ಲಿ ಮುಂದುವರಿಯುವಂತೆ ಸಲಹೆ ನೀಡಲಾಗಿದೆ. ರಾಜೀನಾಮೆ ಪತ್ರವನ್ನು ರಾಷ್ಟ್ರಪತಿಗಳಿಗೆ ಕಳುಹಿಸಲಾಗಿದೆ" ಎಂದು ಹೇಳಿದ್ದಾರೆ .

ಕಾಂಗ್ರೆಸ್ ಕಾರ್ಯಕಾರಿ ಸಮಿತಿಯಲ್ಲಿ ಬಹುಮತ ಪಡೆಯುವಲ್ಲಿ ವಿಫಲರಾದ ಹಿನ್ನೆಲೆಯಲ್ಲಿ ಕಾಂಗ್ರೆಸ್ ಹೈಕಮಾಂಡ್ ಎನ್.ರಂಗಸ್ವಾಮಿಯವರಿಗೆ ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯುವಂತೆ ಆದೇಶ ನೀಡಿತ್ತು.

ಎಐಸಿಸಿಯ ಕಾರ್ಯಕಾರಿ ಸಮಿತಿ ಪುದುಚೇರಿಯ ಮುಖ್ಯಮಂತ್ರಿ ಸ್ಛಾನದ ಅಭ್ಯರ್ಥಿ ಕುರಿತಂತೆ ಚರ್ಚಿಸಲು ಗುರುವಾರ ಸಭೆ ಸೇರಲಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.

ರಾಜೀನಾಮೆ ನೀಡುವುದಕ್ಕಿಂತ ಮೊದಲು ಮುಖ್ಯಮಂತ್ರಿ ರಂಗಸ್ವಾಮಿ ಅಭಿವೃದ್ಧಿ ಯೋಜನೆಗಳಿಗೆ ಬೆಂಬಲ ನೀಡಿದ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ, ಪ್ರಧಾನಿ ಮನ್‌ಮೋಹನ್ ಸಿಂಗ್ ಮತ್ತು ಸಿಪಿಐ, ಡಿಎಂಕೆ ಮತ್ತು ಪಿಎಂಕೆ ಪಕ್ಷಗಳ ನಾಯಕರಿಗೆ ಕೃತಜ್ಞತೆ ಅರ್ಪಿಸಿದರು.
ಮತ್ತಷ್ಟು
ಬಿಹಾರ ಪ್ರವಾಹ 'ರಾಷ್ಟ್ರೀಯ ವಿಕೋಪ': ಪ್ರಧಾನಿ ಘೋಷಣೆ
ಜಮ್ಮು: ಆಘಾತದಿಂದ ಹೊರಬರದ ಒತ್ತೆಯಾಳುಗಳು
ಭಾರತ ಅಣುಒಪ್ಪಂದದ ಒತ್ತಡಕ್ಕೆ ಸಿಲುಕದು: ಕಾಕೋಡ್ಕರ್
ಜಮ್ಮು: ಅವಿತಿದ್ದ ಮೂರೂ ಉಗ್ರರ ಹತ್ಯೆ
ಶೀಘ್ರದಲ್ಲಿ ಭಾರತಕ್ಕೆ ಭೇಟಿ-ಪ್ರಚಂಡ
ಜಾರ್ಖಂಡ್ : ಶಿಬು ಮುಖ್ಯಮಂತ್ರಿಯಾಗಿ ಅಧಿಕಾರ ಸ್ವೀಕಾರ