ಪಕ್ಷ ಸಂಘಟನೆಗಾಗಿ ರಾಜ್ಯಾದ್ಯಂತ ಪ್ರವಾಸ ಮಾಡುವುದಾಗಿ ಮೆಗಾಸ್ಟಾರ್,ಪ್ರಜಾರಾಜ್ಯಂ ಪ್ರಕ್ಷದ ಸ್ಥಾಪಕ ಚಿರಂಜೀವಿ ಅವರು ಬುಧವಾರ ತಿಳಿಸಿದ್ದಾರೆ.
ಅವರು ಹೈದರಾಬಾದ್‌ನ ಪಕ್ಷದ ಕಚೇರಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.ರಾಜ್ಯವ್ಯಾಪಿ ಪಕ್ಷದ ಪ್ರಚಾರಕ್ಕಾಗಿ ಸಿದ್ದತೆ ನಡೆಸುತ್ತಿರುವುದಾಗಿ ಹೇಳಿದರು.
ಪ್ರಜಾರಾಜ್ಯಂ ಪಕ್ಷದ ವಕ್ತಾರರಾಗಿ ಡಾ.ಮಿತ್ರ,ಪರ್ಕಲ್ ಪ್ರಭಾಕರ ಅವರನ್ನು ಆಯ್ಕೆ ಮಾಡಿರುವುದಾಗಿ ಚಿರಂಜೀವಿ ಈ ಸಂದರ್ಭದಲ್ಲಿ ಘೋಷಿಸಿದರು.
ಜನಸಾಮಾನ್ಯರ ಬದುಕನ್ನು ಹಸನುಗೊಳಿಸುವ ಕನಸು ಹೊಂದಿದ್ದು,ಈ ನಿಟ್ಟಿನಲ್ಲಿ ರಾಜಕೀಯದ ಮೂಲಕ ಜನರ ಆಶೋತ್ತರಗಳನ್ನು ಈಡೇರಿಸುವುದಾಗಿ ತಿಳಿಸಿದರು.ಅಲ್ಲದೇ ರಾಜ್ಯರಾಜಕೀಯದಲ್ಲಿ ಬದಲಾವಣೆಯ ಅಗತ್ಯವಿದೆ ಎಂದು ಅಭಿಪ್ರಾಯ ವ್ಯಕ್ತಪಡಿಸಿದರು.
|