ಜಾರ್ಖಂಡ್‌ನ ಸಿಂಗಭೂಮ್ ಜಿಲ್ಲೆಯಲ್ಲಿ ಮಾವೋವಾದಿಗಳು ಹುದುಗಿಸಿಟ್ಟದ್ದ ನೆಲಬಾಂಬ್ ಸ್ಫೋಟಿಸಿದ ಹಿನ್ನೆಲೆಯಲ್ಲಿ ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ 12 ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ಮಾವೋವಾದಿಗಳು ಹುದುಗಿಸಿಟ್ಟಿದ್ದ ನೆಲಬಾಂಬ್ ಸ್ಫೋಟಿಸಿ ದಿಘಾ ಪೊಲೀಸ್ ಠಾಣೆಯ ಸಬ್‌ಇನ್ಸ್‌ಪೆಕ್ಟರ್ ರವಿಕಾಂತ್ ಹಾಗೂ ಇತರ 11 ಮಂದಿ ಪೊಲೀಸರು ಸಾವನ್ನಪ್ಪಿದ್ದಾರೆ ಎಂದು ಜಿಲ್ಲಾ ಉಪ ಪೊಲೀಸ್ ವರಿಷ್ಠಾಧಿಕಾರಿ ಮಧುಸೂಧನ ಬರಿ ಸುದ್ದಿಗಾರರಿಗೆ ತಿಳಿಸಿದ್ದಾರೆ.
ಘಟನಾ ಸ್ಥಳಕ್ಕೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ನವೀನ್‌ಕುಮಾರ್ ಸಿಂಗ್ ಭೇಟಿ ನೀಡಿ, ಜೀಪ್‌ನಲ್ಲಿ ಪ್ರಯಾಣಿಸುತ್ತಿದ್ದ 12 ಮಂದಿ ಪೊಲೀಸರು ಘಟನಾ ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ತಿಳಿಸಿದ್ದಾರೆ.
|