ಇಲ್ಲಿನ ತ್ಯಾಗರಾಜ ನಗರದ ಜನನಿಬಿಡ ರಂಗನಾಥನ್ ಬೀದಿಯ ವಾಣಿಜ್ಯ ಮಳಿಗೆಯೊಂದರ ನಾಲ್ಕನೆ ಮಹಡಿಯಲ್ಲಿ ಬೆಂಕಿ ಅನಾಹುತ ಸಂಭವಿಸಿದ್ದು, ಕೋಟ್ಯಂತರ ರೂಪಾಯಿಯ ಸಾಮಾಗ್ರಿ ಹಾನಿಗೀಡಾಗಿದೆ.
ಅದೃಷ್ಟವಶಾತ್ ಯಾವುದೇ ಜೀವಹಾನಿಯಾಗಿರುವ ಕುರಿತು ವರದಿಯಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.
ಸೋಮವಾರ ಮುಂಜಾನೆ ಈ ದುರಂತ ಸಂಭವಿಸಿದ್ದು, ಬೆಂಕಿ ಅಪಘಾತಕ್ಕೆ ಕಾರಣ ತಿಳಿದುಬಂದಿಲ್ಲ. ಅಗ್ನಿಶಾಮಕ ದಳದ ಸುಮಾರು 20 ಮಂದಿ ಬೆಂಕಿಯ ಜ್ವಾಲೆಯನ್ನು ಆರಿಸಲು ಪ್ರಯತ್ನಿಸುತ್ತಿದ್ದಾರೆ.
ಅಪಾಘಾತಕ್ಕೆ ಕಾರಣವೇನು ಎಂಬ ಕುರಿತು ತನಿಖೆ ಪ್ರಗತಿಯಲ್ಲಿದೆ.
|