ನೈನಾದೇವಿ ದೇವಾಲಯ ಕಾಲ್ತುಳಿತ ದುರಂತದ ತನಿಖೆಯಲ್ಲಿ ತಪ್ಪಿತಸ್ಥರೆಂದು ಕಂಡು ಬಂದಿರುವ ಅಧಿಕಾರಿಗಳ ವಿರುದ್ಧ ಹಿಮಾಚಲ ಪ್ರದೇಶ ಸರಕಾರವು ಶಿಸ್ತುಕ್ರಮ ಕೈಗೊಳ್ಳಲು ಮುಂದಾಗಿದೆ.
ಬಿಲ್ಸಾಪುರ ಜಿಲ್ಲೆಯಲ್ಲಿ ಆಗಸ್ಟ್ 3ರಂದು ಸಂಭವಿಸಿರುವ ಈ ದುರಂತದ ಕುರಿತು ತನಿಖೆ ನಡೆಸಿರುವ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ತನಿಖಾ ವರದಿಯನ್ನು ಸಲ್ಲಿಸಿದ್ದು, ವರದಿಯಲ್ಲಿ ಮಾಡಲಾಗಿರುವ ಶಿಫಾರಸ್ಸುಗಳನ್ನು ಜಾರಿಗೆ ತರಲು ಸರಕಾರ ನಿರ್ಧರಿಸಿದೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ದೇವಾಲಯಕ್ಕೆ ತೆರಳುವ ಸೆಕ್ಟರ್ 4 ಮತ್ತು 5ರ ಹಾದಿಯಲ್ಲಿ ನೇಮಿಸಲಾಗಿದ್ದ ಅಧಿಕಾರಿಗಳು ಭಕ್ತರ ಹರಿವನ್ನು ನಿಯಂತ್ರಿಸಲು ವಿಫಲವಾಗಿರುವುದೇ ಈ ದುರಂತಕ್ಕೆ ಕಾರಣ ಎಂದು ವರದಿಯಲ್ಲಿ ಹೇಳಲಾಗಿದೆ.
ಈ ಎರಡು ಸೆಕ್ಟರ್‌ಗಳಲ್ಲಿ ನಿಯೋಜಿಸಲಾಗಿದ್ದ ಅಧಿಕಾರಿಗಳ ವಿರುದ್ಧ ಕ್ರಮಕೈಗೊಳ್ಳಲು, ಮುಖ್ಯಮಂತ್ರಿ ಪ್ರೇಮ್ ಕುಮಾರ್ ಧುಮಲ್ ಅವರ ಅಧ್ಯಕ್ಷತೆಯಲ್ಲಿ ನಡೆಸಲಾದ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.
ಈ ಕಾಲ್ತುಳಿತ ದುರಂತದಲ್ಲಿ 142 ಮಂದಿ ಭಕ್ತರು ಸಾವನ್ನಪ್ಪಿದ್ದರು.
|