ಸಿಂಗೂರ್ ವಿವಾದವನ್ನು ಬಗೆಹರಿಸುವ ನಿಟ್ಟಿನಲ್ಲಿ ಇದೀಗ ಪಶ್ಚಿಮಬಂಗಾಳ ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಜಿ ಅವರು ಶುಕ್ರವಾರ ರಾತ್ರಿ ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಅವರೊಂದಿಗೆ ಮುಖಾಮುಖಿ ಮಾತುಕತೆ ನಡೆಸಲಿದ್ದಾರೆ ಎಂದು ಸಿಪಿಐ(ಎಂ)ಮೂಲಗಳು ತಿಳಿಸಿವೆ.
ಲ್ಯಾಂಡ್ ಸರ್ಜ್ ಕಮಿಟಿಯ ನಾಲ್ಕು ಮಂದಿ ಸದಸ್ಯರು ಸೇರಿದಂತೆ ಬುದ್ದದೇವ್ ಅವರು ಮಮತಾ ಬ್ಯಾನರ್ಜಿ ಅವರೊಂದಿಗೆ ಸಿಂಗೂರ್ ವಿವಾದವನ್ನು ಸೌಹಾರ್ದಯುತವಾಗಿ ಬಗೆಹರಿಸುವ ನಿಟ್ಟಿನಲ್ಲಿ ಮಾತುಕತೆ ನಡೆಸಲು ಮುಂದಾಗಿದ್ದಾರೆ.
ಈಗಾಗಲೇ ಸಿಂಗೂರ್ ವಿವಾದಕ್ಕೆ ಸಂಬಂಧಿಸಿದಂತೆ ಪಶ್ಚಿಮಬಂಗಾಳ ಸರ್ಕಾರ ಮಮತಾ ಅವರು 300ಎಕರೆ ಭೂಮಿಯನ್ನು ರೈತರಿಗೆ ಹಿಂತಿರುಗಿಸುವಂತೆ ಇಟ್ಟಿದ್ದ ಬೇಡಿಕೆಯನ್ನು ತಿರಸ್ಕರಿಸಿತ್ತು. ಇದರಿಂದ ಸಿಂಗೂರ್ ವಿವಾದ ದಿನದಿಂದ ದಿನಕ್ಕೆ ಕಗ್ಗಂಟಾಗತೊಡಗಿದೆ.
ಈ ಹಿನ್ನೆಲೆಯಲ್ಲಿ ಪಶ್ಚಿಮಬಂಗಾಳ ಸರ್ಕಾರ ಸಿಂಗೂರ್ ವಿವಾದ ಬಗೆಹರಿಕೆಗಾಗಿ ಮೂರನೇ ಸುತ್ತಿನ ಮಾತುಕತೆಗೆ ಮುಂದಾಗಿದೆ.
|