ಮುರುಘಾಮಠದ ವತಿಯಿಂದ ನೀಡುವ ಪ್ರತಿಷ್ಠಿತ ಬಸವಶ್ರೀ ಪ್ರಶಸ್ತಿಗೆ ದೇಶದ ಪ್ರಥಮ ಮಹಿಳಾ ಐಪಿಎಸ್ ಅಧಿಕಾರಿ ಡಾ.ಕಿರಣ್ ಬೇಡಿ ಅವರನ್ನು ಆಯ್ಕೆ ಮಾಡಲಾಗಿದೆ.
ಕಿರಣ್ ಬೇಡಿ ಅವರ ಕರ್ತವ್ಯ ನಿಷ್ಠೆ,ಸಾಮಾಜಿಕ ಬದ್ದಕೆ, ನಿಸ್ಪೃಹ ಸೇವೆ ಮತ್ತು ಸಮಾಜ ಸುಧಾರಣಾ ಚಟುವಟಿಕೆಗಳನ್ನು ಪರಿಗಣಿಸಿ 2008ನೇ ಸಾಲಿನ ಪ್ರಶಸ್ತಿಯನ್ನು ನೀಡಲಾಗುತ್ತಿದೆ ಎಂದು ಮುರುಘಾ ಮಠದ ಶಿವಮೂರ್ತಿ ಮುರುಘಾ ಶರಣರು ಸೋಮವಾರ ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.
ಪ್ರಶಸ್ತಿಯು ಒಂದು ಲಕ್ಷ ರೂಪಾಯಿ ನಗದು ಮತ್ತು ಫಲಕಗಳನ್ನು ಒಳಗೊಂಡಿದೆ.
|