ಜೈಪುರ ಚೋಮು ಎಂಬಲ್ಲಿ ಮಂಗಳವಾರ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಮಹಿಳೆಯೊಬ್ಬಾಕೆ ಸೇರಿದಂತೆ ಏಳುಮಂದಿ ಸಾವನ್ನಪ್ಪಿದ್ದು, ವ್ಯಕ್ತಿಯೋರ್ವ ಗಾಯಗೊಂಡಿರುವುದಾಗಿ ವರದಿಯಾಗಿದೆ.
ಈ ನತದೃಷ್ಟರು ಪ್ರಯಾಣಿಸುತ್ತಿದ್ದ ವ್ಯಾನು, ಟ್ರಕ್ಕೊಂದಕ್ಕೆ ಡಿಕ್ಕಿಯಾದ ಪರಿಣಾಮ ದುರ್ಘಟನೆ ಸಂಭವಿಸಿದೆ. ಇಲ್ಲಿಂದ 30 ಕಿ.ಮೀ ದೂರದಲ್ಲಿ ಜೈಪುರ ಸಿಕಾರ್ ರಸ್ತೆಯಲ್ಲಿ ಅಪಘಾತ ಸಂಭವಿಸಿದ್ದು, ಆರು ಮಂದಿ ಸ್ಥಳದಲ್ಲಿ ಮೃತರಾಗಿದ್ದರೆ, ಗಾಯಗೊಂಡಿದ್ದ ಮತ್ತೊರ್ವ ಆಸ್ಪತ್ರೆಯಲ್ಲಿ ಪ್ರಾಣ ತೊರೆದಿರುವುದಾಗಿ ಪೊಲೀಸರು ಹೇಳಿದ್ದಾರೆ.
ಇತರ ಗಾಯಾಳು ಇಲ್ಲಿನ ಎಸ್ಎಂಎಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
|