ಸಿಂಗೂರ್‌ನ ಟಾಟಾ ನ್ಯಾನೋ ಘಟಕಕ್ಕಾಗಿ ವಶಪಡಿಸಿಕೊಂಡ ಭೂಮಿಯಲ್ಲಿ 400ಎಕರೆಯನ್ನು ಸೆಪ್ಟೆಂಬರ್ 7ರ ಒಪ್ಪಂದದಂತೆ ರೈತರಿಗೆ ವಾಪಸು ನೀಡಲು ತೃಣಮೂಲ ಕಾಂಗ್ರೆಸ್ ವರಿಷ್ಠೆ ಮಮತಾ ಬ್ಯಾನರ್ಜಿ ಪಶ್ಚಿಮಬಂಗಾಳ ಸರ್ಕಾರಕ್ಕೆ 7ದಿನಗಳ ಅಂತಿಮ ಗಡುವು ನೀಡಿದ್ದಾರೆ.
ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದ್ದು, ಶೀಘ್ರವೇ ಕಲಂ 355 ಅನ್ನು ಜಾರಿಗೊಳಿಸುವಂತೆ ಬ್ಯಾನರ್ಜಿ ಅವರು ಪ್ರಧಾನಿ ಮನಮೋಹನ್ ಸಿಂಗ್ ಮತ್ತು ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ಆಗ್ರಹಿಸಿದ್ದಾರೆ.
ಸಿಂಗೂರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸೆಪ್ಟೆಂಬರ್ 25 ಮತ್ತು 26ರಂದು ಸಿಂಗೂರ್ ಮತ್ತು ಕೋಲ್ಕತಾದಲ್ಲಿ ಸಾರ್ವಜನಿಕ ಸಭೆಯನ್ನು ನಡೆಸಲು ನಿರ್ಧರಿಸಿರುವುದಾಗಿ ಈ ಸಂದರ್ಭದಲ್ಲಿ ಅವರು ತಿಳಿಸಿದ್ದಾರೆ.
ಸಿಂಗೂರ್‌ನಲ್ಲಿ ವಿರೋಧ ಪಕ್ಷವಾದ ತೃಣಮೂಲ ಕಾಂಗ್ರೆಸ್ ನಡೆಸುತ್ತಿರುವ ಚಳವಳಿಯನ್ನು ಹಿಂತೆಗೆದುಕೊಳ್ಳುವಂತೆ ಮುಖ್ಯಮಂತ್ರಿ ಬುದ್ಧದೇವ್ ಭಟ್ಟಾಚಾರ್ಯ ಅವರು ಮನವಿ ಮಾಡಿಕೊಂಡ ಬೆನ್ನಲ್ಲೇ, ಬ್ಯಾನರ್ಜಿ ಸರ್ಕಾರಕ್ಕೆ ಅಂತಿಮ ಎಚ್ಚರಿಕೆಯನ್ನು ಸೋಮವಾರ ರವಾನಿಸಿದ್ದಾರೆ.
|