ಒರಿಸ್ಸಾ ಪ್ರವಾಹದಿಂದ ತತ್ತರಿಸಿದ್ದು, ಪ್ರವಾಹಪೀಡಿತ ಪ್ರದೇಶಗಳಿಗೆ ಮಂಗಳವಾರ ಕೇಂದ್ರ ಗೃಹ ಸಚಿವ ಶಿವರಾಜ್ ಪಾಟೀಲ್ ಭೇಟಿ ನೀಡಿ ಪರಿಶೀಲನೆ ನಡೆಸಲಿದ್ದಾರೆ.
ರಾಜ್ಯದಲ್ಲಿನ ಪ್ರವಾಹ ಪರಿಸ್ಥಿತಿಯ ಕುರಿತಾಗಿ ಮುಖ್ಯಮಂತ್ರಿ ನವೀನ್ ಪಟ್ನಾಯಕ್ ಅವರೊಂದಿಗೆ ಶಿವರಾಜ್ ಪಾಟೀಲ್ ಅವರು ಮಾತುಕತೆ ನಡೆಸಲಿದ್ದಾರೆ.
ಪ್ರವಾಹದಿಂದ ತತ್ತರಿಸಿರುವ ಪುರಿ, ಕಟಕ್, ಜಗತ್‌ಸಿಂಗ್‌ಪುರ್, ಕೆಂದ್ರಾಪಾರಾ ಮತ್ತು ಜೈಪುರ ಭಾಗಗಳನ್ನು ಪಾಟೀಲ್ ವೈಮಾನಿಕ ಸಮೀಕ್ಷೆ ನಡೆಸಲಿದ್ದಾರೆ ಎಂದು ಗೃಹಕಚೇರಿಯ ಮೂಲಗಳು ತಿಳಿಸಿವೆ.
ಮಹಾನದಿಯಲ್ಲಿನ ನೀರಿನ ಮಟ್ಟ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಪರಿಣಾಮ ರಾಜ್ಯದ ಅನೇಕ ಜಿಲ್ಲೆಗಳು ಸಂಪೂರ್ಣ ಜಲಾವೃತವಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತವಾಗಿದೆ. ಅಲ್ಲದೇ ಕುಡಿಯುವ ನೀರು,ಆಹಾರ,ವಸತಿ ವ್ಯವಸ್ಥೆ ಇಲ್ಲದೆ ಜನರು ಪರದಾಡುವಂತಾಗಿದೆ.
|