ಭಾರತ ಅಮೆರಿಕ ನಾಗರಿಕ ಪರಮಾಣು ಒಪ್ಪಂದದಿಂದ ಜಾಗತಿಕ ಇಂಧನಭಧ್ರತೆಯ ಮೇಲೆ ಸಕಾರಾತ್ಮಕ ಪರಿಣಾಮವಾಗಲಿದೆ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅಭಿಪ್ರಾಯಪಟ್ಟಿದ್ದಾರೆ .
ಜಗತ್ತಿನ ಪ್ರಮುಖ ರಾಷ್ಟ್ರಗಳ ನಾಯಕರು ಸೇರಿದ್ದ ವಿಶ್ವಸಂಸ್ಥೆಯ ಸಾಮಾನ್ಯ ಸಭೆಯ ಅಧಿವೇಶನದಲ್ಲಿ ಭಾಷಣ ಮಾಡಿದ ಪ್ರಧಾನಿ ಸುಧಾರಣೆ ಮತ್ತು ಭಯೋತ್ಪಾದನೆ ವಿರುದ್ಧದ ಹೋರಾಟದಲ್ಲಿ ಸಾಮೂಹಿಕತೆ ಅಗತ್ಯ ಎಂದು ಪ್ರತಿಪಾದಿಸಿದರು.
ಜಾಗತಿಕ ಅಣು ವ್ಯಾಪಾರದಲ್ಲಿ ಭಾರತ ಪ್ರವೇಶ ಪಡೆದಿರುವುದು ಮೈಲುಗಲ್ಲಾಗಿದ್ದು, ಅಣ್ವಸ್ತ್ರ ಪ್ರಸರಣ ನಿಷೇಧದ ಬಗ್ಗೆ ದೇಶ ತನ್ನ ನಿಲುವನ್ನು ಸ್ಪಷ್ಟಪಡಿಸಿದಂತಾಗಿದೆ ಎಂದು ಪ್ರಧಾನಿ ಹೇಳಿದ್ದಾರೆ.
|