ಸಾರ್ವಜನಿಕ ಸ್ಥಳಗಳಲ್ಲಿ ಅ.2ರಿಂದ ಧೂಮಪಾನ ಮಾಡಬಾರದು ಎಂದು ಕೇಂದ್ರ ಸರ್ಕಾರ ಹೇರಿದ್ದ ನಿಷೇಧಕ್ಕೆ ತಡೆಯಾಜ್ಞೆ ನೀಡಲು ಸೋಮವಾರ ಸುಪ್ರೀಂಕೋರ್ಟ್ ತಿರಸ್ಕರಿಸಿದೆ.
ಕೇಂದ್ರ ಸರ್ಕಾರ ಪ್ರಸಕ್ತ ಸಾಲಿನ ಮೇ 30ರಂದು, ಅಕ್ಟೋಬರ್ 2ರ ಗಾಂಧಿ ಜಯಂತಿ ದಿನದಿಂದ ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಸೇವನೆಯನ್ನು ನಿಷೇಧಿಸಲಾಗುವುದು ಎಂದು ನಿರ್ಣಯ ಕೈಗೊಂಡು ಪ್ರಕಟಣೆ ಹೊರಡಿಸಿದ್ದು,ಸರ್ಕಾರದ ನಿಲುವಿಗೆ ತಡೆಯಾಜ್ಞೆ ನೀಡಲು ಸಾಧ್ಯವಿಲ್ಲ ಎಂದು ಸುಪ್ರೀಂಕೋರ್ಟ್‌ನ ನ್ಯಾಯಾಧೀಶರಾದ ಬಿ.ಎನ್.ಅಗರ್‌ವಾಲ್ ಅವರು ಪೀಠ ಮೇಲ್ಮನವಿಯನ್ನು ತಳ್ಳಿ ಹಾಕಿದೆ.
ಈ ನಿಷೇಧಕ್ಕೆ ಮಧ್ಯಂತರ ತಡೆಯಾಜ್ಞೆ ನೀಡಲು ಯಾವುದೇ ಅಂತಹ ಯಾವುದೇ ಬಲವಾದ ಕಾರಣಗಳು ಇಲ್ಲ ಎಂದು ಅಭಿಪ್ರಾಯ ವ್ಯಕ್ತಪಡಿಸಿದ ನ್ಯಾಯಪೀಠ, ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ನಿಷೇಧಕ್ಕೆ ತಡೆ ನೀಡಲು ಸಾಧ್ಯವಿಲ್ಲ ಎಂದು ತಿಳಿಸಿ, ನವೆಂಬರ್ 18ಕ್ಕೆ ದೂರಿನ ವಿಚಾರಣೆ ನಡೆಸುವುದಾಗಿ ಹೇಳಿದೆ.
ಈ ಬಗ್ಗೆ ದೇಶದ ಯಾವ ನ್ಯಾಯಾಲಯಗಳು ಈ ಬಗ್ಗೆ ಯಾವುದೇ ಆದೇಶ ನೀಡಬಾರದು ಎಂಬುದಾಗಿಯೂ ಈ ಸಂದರ್ಭದಲ್ಲಿ ಸ್ಪಷ್ಟನೆ ನೀಡಿದೆ. ಸಾರ್ವಜನಿಕ ಸ್ಥಳಗಳಲ್ಲಿ ಮಹಾತ್ಮಗಾಂಧಿಜಿಯವರ ಜನ್ಮದಿನವಾದ ಅ.2 ರಿಂದ ಧೂಮಪಾನ ನಿಷೇಧಿಸಬೇಕೆಂಬ ಸರ್ಕಾರದ ಆದೇಶದ ವಿರುದ್ಧ ವಿವಿಧ ಹೈಕೋರ್ಟ್‌ಗಳಲ್ಲಿ ದೂರು ದಾಖಲಾಗಿದ್ದು,ವಿಚಾರಣೆಗೆ ಬಾಕಿ ಇದೆ. |
|