ರಾಜಸ್ತಾನ್ ಚಾಮುಂಡಾ ದೇವಿ ದೇವಾಲಯದಲ್ಲಿ ಮಂಗಳವಾರ ಬೆಳಿಗ್ಗೆ ಸಂಭವಿಸಿದ ಕಾಲ್ತುಳಿತ ಪ್ರಕರಣದ ತನಿಖೆ ನಡೆಸುವಂತೆ ಮುಖ್ಯಮಂತ್ರಿ ವಸುಂಧರಾ ರಾಜೆ ಅವರು ಆದೇಶ ನೀಡಿದ್ದಾರೆ.
ಚಾಮುಂಡಾ ದೇವಿ ದೇವಾಲಯದಲ್ಲಿ ಸಂಭವಿಸಿದ ಕಾಲ್ತುಳಿತದಲ್ಲಿ 150ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದು, 250ಕ್ಕೂ ಮಿಕ್ಕಿ ಭಕ್ತರು ಗಾಯಗೊಂಡಿದ್ದರು. ಘಟನೆಯಲ್ಲಿ ಸಾವನ್ನಪ್ಪಿದ ಕುಟುಂಬಗಳಿಗೆ ತಲಾ ಎರಡು ಲಕ್ಷ ರೂಪಾಯಿ ಪರಿಪಾರ ನೀಡಲಾಗುವುದು ಎಂದು ರಾಜೆ ಘೋಷಿಸಿದ್ದಾರೆ.
ಘಟನೆ ನಡೆದ ಸ್ಥಳಕ್ಕೆ ಮುಖ್ಯಮಂತ್ರಿ ರಾಜೆ ಅವರು ಭೇಟಿ ನೀಡಿ ಪರಿಶೀಲಿಸಿದರು. ಸಹಾಯಕ ಚೀಪ್ ಸೆಕ್ರೆಟರಿ ಅವರ ನೇತೃತ್ವದಲ್ಲಿ ತನಿಖೆ ನಡೆಸಲಾಗುವುದು ಎಂದು ಈ ಸಂದರ್ಭದಲ್ಲಿ ತಿಳಿಸಿದರು.
ಅಲ್ಲದೇ ಘಟನೆಯಲ್ಲಿ ಗಾಯಗೊಂಡವರಿಗೆ 50ಸಾವಿರ ಪರಿಹಾರ ನೀಡಲಾಗುವುದು ಎಂದರು. ದುರಂತ ನಡೆದ ಸ್ಥಳಕ್ಕೆ ರಾಜಸ್ತಾನದ ಮಾಜಿ ಮುಖ್ಯಮಂತ್ರಿ ಕಾಂಗ್ರೆಸ್‌ನ ಅಶೋಕ್ ಗೆಹ್ಲೋಟ್ ಅವರು ಭೇಟಿ ನೀಡಿ,ಘಟನೆಗೆ ಸಂಬಂಧಿಸಿದಂತೆ ನ್ಯಾಯಾಂಗ ತನಿಖೆ ನಡೆಸಬೇಕೆಂದು ಆಗ್ರಹಿಸಿದರು. |
|