ಭಯೋತ್ಪಾದನೆ ವಿರುದ್ಧ ಸಮರ ಸಾರುತ್ತೇನೆ ಎಂದು ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಹೇಳುವುದು ಬರೀ ಬೂಟಾಟಿಕೆ ಮಾತು ಎಂದು ಶಿವಸೇನಾ ಮುಖ್ಯಸ್ಥ ಬಾಳಾ ಠಾಕ್ರೆ ತಿಳಿಸಿದ್ದಾರೆ.
ಶಿವಸೇನಾದ ಮುಖವಾಣಿ ಸಾಮ್ನಾ ಸಂಪಾದಕೀಯದಲ್ಲಿ ಸೋನಿಯಾ ವಿರುದ್ಧ ಮತ್ತೆ ಕಿಡಿಕಾರಿರುವ ಅವರು, ಬಂಧಿತ ಉಗ್ರರ ಬಗ್ಗೆ ತೋರಿಸುವ ಕಾಂಗ್ರೆಸ್ ಮತ್ತು ಸಮಾಜವಾದಿ ಪಕ್ಷಗಳು ದೇಶದ ಶತ್ರುಗಳು ಎಂದು ಆಪಾದಿಸಿದ್ದಾರೆ.
ಸಂಸತ್ ಭವನದ ಮೇಲೆ ದಾಳಿ ಮಾಡಿದ ಅಫ್ಜಲ್ ಗುರುವಿಗೆ ಮರಣದಂಡನೆ ತಪ್ಪಿಸುವ ಬಗ್ಗೆ ಪ್ರಯತ್ನ ಮಾಡುತ್ತಿರುವ ಕಾಂಗ್ರೆಸ್, ಮತ್ತೊಂದೆಡೆ ಮುಸ್ಲಿಂ ಉಗ್ರರನ್ನು ದಮನಿಸುವುದಾಗಿ ಹೇಳಿಕೆ ನೀಡುತ್ತಿರುವುದು ದೊಡ್ಡ ತಮಾಷೆ ಎಂದು ಹೇಳಿದ್ದಾರೆ.
ಇಸ್ಲಾಮಿಕ್ ಉಗ್ರವಾದದ ವಿರುದ್ಧ ಹಿಂದುಗಳು ಸೆಟೆದು ನಿಲ್ಲಬೇಕು ಎಂದು ಠಾಕ್ರೆ ಸಾಮ್ನಾ ಸಂಪಾದಕೀಯದಲ್ಲಿ ಫರ್ಮಾನು ಹೊರಡಿಸಿದ್ದಾರೆ. |