ಮಾಹಿತಿ ಮತ್ತು ಪ್ರಸಾರ ಖಾತೆ ಸಚಿವ ಪ್ರಿಯರಂಜನ್ ದಾಸ್ ಮುನ್ಶಿ ಅವರು ಹೃದಯದ ಖಾಯಿಲೆಯಿಂದ ಬಳಲುತ್ತಿದ್ದು ಅವರನ್ನು ಸೋಮವಾರ ಮುಂಜಾನೆ ಎಐಐಎಂಎಸ್ ಆಸ್ಪತ್ರೆಗೆ ದಾಖಲಿಸಲಾಗಿದೆ.
ನಸುಕಿಗೂ ಮುಂಚಿನ ಅವಧಿಯ ಸುಮಾರು 2.30ರ ವೇಳೆಗೆ ದಾಸ್‌ಮುನ್ಶಿಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಮುನ್ಶಿಯವರಿಗೆ ವೆಂಟಿಲೇಟರ್ ಅಳವಡಿಸಲಾಗಿದೆ ಎಂದು ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರು ತಿಳಿಸಿದ್ದು ಅವರ ಸ್ಥಿತಿ ಗಂಭೀರವಾಗಿದೆ ಎಂದು ಹೇಳಿದ್ದಾರೆ.
ಶ್ವಾಸಕೋಶ ಹಾಗೂ ತೀವ್ರ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಅವರನ್ನು ಮೊದಲಿಗೆ ತುರ್ತುನಿಗಾ ಘಟಕಕ್ಕೆ ದಾಖಲಿಸಲಾಗಿತ್ತು, ಬಳಿಕ ಅವರ ಸ್ಥಿತಿ ಸ್ವಲ್ಪ ಸ್ಥಿರವಾದ ಬಳಿಕ ಅವರನ್ನು ಕೊರೊನರಿ ಕೇರ್ ಘಟಕಕ್ಕೆ ವರ್ಗಾಯಿಸಲಾಯಿತು.
ಅವರ ಪ್ರಮುಖ ಅಂಗಾಂಗಗಳು ಸ್ಥಿರವಾಗಿವೆಯಾದರೂ ಅವರ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ಹೇಳಿದ್ದಾರೆ. |