ಸುದ್ದಿ ಜಗತ್ತು
ವ್ಯವಹಾರ
ರಾಜ್ಯ ಸುದ್ದಿ
ರಾಷ್ಟ್ರೀಯ
ಮನರಂಜನೆ
ಸ್ಯಾಂಡಲ್ ವುಡ್
ಬಾಲಿವುಡ್‌
ಇನ್ನಷ್ಟು ಹಾಸ್ಯ...
ಕ್ರೀಡಾ ಜಗತ್ತು
ಕ್ರಿಕೆಟ್ ಟಿಕರ್
ಕ್ರೀಡಾಸುದ್ದಿ
ಕ್ರಿಕೆಟ್‌
ಜ್ಯೋತಿಷ್ಯ
ಜ್ಯೋತಿಷ್ಯಶಾಸ್ತ್ರ
ವಾಸ್ತು
ನಿಮ್ಮ ಜಾತಕ
ಫೋಟೋ ಗ್ಯಾಲರಿ
ಹಾಟ್‌ಶಾಟ್
ಸಿನಿಮಾ
ಬಾಲಿವುಡ್
ಮುಖ್ಯ ಪುಟ > ಸುದ್ದಿ ಜಗತ್ತು > ಸುದ್ದಿಗಳು > ರಾಷ್ಟ್ರೀಯ > ಐದು ರಾಜ್ಯಗಳಲ್ಲಿ ಚುನಾವಣಾ ದಿನಾಂಕ ಘೋಷಣೆ
ಸಲಹೆ/ಪ್ರತಿಕ್ರಿಯೆಮಿತ್ರನಿಗೆ ಕಳುಹಿಸಿಈ ಪುಟ ಮುದ್ರಿಸಿ
 
ಐದು ರಾಜ್ಯಗಳಲ್ಲಿ ಚುನಾವಣಾ ದಿನಾಂಕ ಘೋಷಣೆ
ನವದೆಹಲಿ: ಐದು ರಾಜ್ಯಗಳಲ್ಲಿ ನಡೆಯಲಿರುವ ವಿಧಾನ ಸಭಾ ಚುನಾವಣಾ ದಿನಾಂಕವನ್ನು ಚುನಾವಣಾ ಆಯೋಗವು ಮಂಗಳವಾರ ಪ್ರಕಟಿಸಿದೆ.

ಮಧ್ಯಪ್ರದೇಶ, ದೆಹಲಿ, ಚತ್ತೀಸ್‌ಗಢ, ರಾಜಸ್ಥಾನ ಮತ್ತು ಮಿಜೋರಾಂಗಳಲ್ಲಿ ಚುನಾವಣೆಗಳು ನಡೆಯಲಿವೆ.

ಚತ್ತೀಸ್‌ಗಢದಲ್ಲಿ ನವೆಂಬರ್ 14 ಮತ್ತು 20ರಂದು ಎರಡು ಹಂತಗಳ ಚುನಾವಣೆ ನಡೆಯಲಿದೆ.

ಮಧ್ಯಪ್ರದೇಶದಲ್ಲಿ ನವೆಂಬರ್ 25, ಮಿಜೋರಾಂ ಹಾಗೂ ದೆಹಲಿಗಳಲ್ಲಿ ನವೆಂಬರ್ 29ರಂದು ಚುನಾವಣೆಗಳು ನಡೆಯಲಿವೆ.

ಅಂತೆಯೇ ರಾಜಸ್ಥಾನದಲ್ಲಿ ಡಿಸೆಂಬರ್ 8ರಂದು ಶಾಸನಸಭೆ ಚುನಾವಣೆ ನಿಗದಿಯಾಗಿದೆ. ಆದರೆ ಜಮ್ಮು ಮತ್ತು ಕಾಶ್ಮೀರದಲ್ಲಿ ಚುನಾವಣೆ ನಡೆಸುವ ಕುರಿತು ಇದುವರೆಗೆ ಯಾವುದೇ ನಿರ್ಧಾರ ಕೈಗೊಳ್ಳಲಾಗಿಲ್ಲ.

ಈ ರಾಜ್ಯಗಳಲ್ಲಿ ಮತಗಳ ಎಣಿಕಾ ಕಾರ್ಯವು ಡಿಸೆಂಬರ್ 8ರಂದು ನಡೆಯಲಿದೆ.

ಜಮ್ಮು ಕಾಶ್ಮೀರದಲ್ಲಿನ ಪರಿಸ್ಥಿತಿಯನ್ನು ಚುನಾವಣಾ ಆಯೋಗವು ಪರಿಶೀಲಿಸುತ್ತಿದೆ ಎಂದು ಆಯೋಗದ ಮುಖ್ಯಸ್ಥ ಎನ್.ಗೋಪಾಲಸ್ವಾಮಿ ಹೇಳಿದ್ದಾರೆ.

ಈ ರಾಜ್ಯಗಳಲ್ಲಿ ಚುನಾವಣಾ ನೀತಿ ಸಂಹಿತೆಯು ಇಂದಿನಿಂದಲೇ ಜಾರಿಗೆ ಬರಲಿದೆ. ಈ ಚುನಾವಣೆಯನ್ನು ಮುಂದಿನ ವರ್ಷದಲ್ಲಿ ನಡೆಯಲಿರುವ ಲೋಕಾಸಭಾ ಚುನಾವಣೆಯ ಸೆಮಿಫೈನಲ್ ಎಂದೇ ಪರಿಗಣಿಸಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ
ಮತ್ತಷ್ಟು
ಬರಿಗೈಲಿ ಹಿಂತಿರುಗಿದ ದುರಾಸೆಯ ವರ!
ಬಜರಂಗದಳ ಮ‌ೂಲಭೂತವಾದಿ ಸಂಘಟನೆ: ಪಟ್ನಾಯಕ್
ಮಾಯ ಮಾಯೆ: ಸೋನಿಯಾರ ರ‌್ಯಾಲಿ ರದ್ದು
ಮಾಯಾ ಆದೇಶಕ್ಕೆ ಹೈಕೋರ್ಟ್ ತಡೆಯಾಜ್ಞೆ
ತ.ನಾ: ಕ್ರೈಸ್ತರ ವಿಶೇಷ ಮೀಸಲಾತಿ ಹಿಂತೆಗೆತ
ಅಸ್ಸಾಂ ಹಿಂಸೆಗೆ ಬಾಂಗ್ಲಾ ವಲಸಿಗರು ಕಾರಣರಲ್ಲ: ಗೊಗೊಯ್
ಮುಖಪುಟ  | ನಮ್ಮ ಕುರಿತು  | ಸಲಹೆಗಳು  | ಜಾಹೀರಾತು ನೀಡಲು  | ಮಿತ್ರನಿಗೆ ಕಳಿಸು  | ಹಕ್ಕು ನಿರಾಕರಣೆ
Copyright © 2009 Webdunia.com