ಕಾನ್ಪುರದ ಥಾಣೆ ಬಜಾರಿಯಾದಲ್ಲಿ ಮಂಗಳವಾರ ಸಂಜೆ ಸೈಕಲ್‌ನಲ್ಲಿಟ್ಟ ಕಚ್ಚಾ ಬಾಂಬ್‌ವೊಂದು ಸ್ಫೋಟಿಸಿದ ಪರಿಣಾಮ ಆರು ಮಂದಿ ಗಾಯಗೊಂಡಿರುವ ಘಟನೆ ನಡೆದಿದೆ.
ಕೋಮು ಸೂಕ್ಷ್ಮಪ್ರದೇಶವಾದ ಕೋಲೊನೆಲ್‌ಗಂಜ್‌ನ ಜನನಿಬಿಡ ಪ್ರದೇಶದಲ್ಲಿ ಈ ಸ್ಫೋಟ ಸಂಭವಿಸಿದ್ದು, ಓರ್ವ ಮಹಿಳೆ, ಮಕ್ಕಳು ಸೇರಿದಂತೆ ಆರು ಮಂದಿ ಗಾಯಗೊಂಡಿರುವುದಾಗಿ ಪ್ರಾಥಮಿಕ ವರದಿಯಿಂದ ತಿಳಿದು ಬಂದಿದೆ. ಗಾಯಾಳುಗಳಲ್ಲಿ ಇಬ್ಬರ ಸ್ಥಿತಿ ಗಂಭೀರವಾಗಿರುವುದಾಗಿ ತಿಳಿಸಿದ್ದಾರೆ.
ಆದೆರೆ ಈ ಸ್ಫೋಟ ಉಗ್ರರ ಕೃತ್ಯವಲ್ಲ ಎಂದು ಪೊಲೀಸ್ ಅಧಿಕಾರಿಗಳು ಸ್ಪಷ್ಟಪಡಿಸಿದ್ದು, ಘಟನೆಯ ಕುರಿತು ತೀವ್ರ ತನಿಖೆ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಪರಿಸ್ಥಿತಿ ಉದ್ನಿಗ್ನಗೊಂಡಿರುವುದಾಗಿ ತಿಳಿಸಿರುವ ಕಾನ್ಪುರ ಪೊಲೀಸ್ ವರಿಷ್ಠಾಧಿಕಾರಿ ವಿಕ್ರಮ್ ಸಿಂಗ್, ಮುಂಜಾಗ್ರತಾ ಕ್ರಮವಾಗಿ ಹೆಚ್ಚಿನ ಪೊಲೀಸರನ್ನು ನಿಯೋಜಿಸಿರುವುದಾಗಿ ತಿಳಿಸಿದ್ದಾರೆ.
ಸೈಕಲ್‌ನಲ್ಲಿಟ್ಟಿದ್ದ ಕಚ್ಚಾ ಬಾಂಬ್ ಸ್ಫೋಟಿಸಿರುವುದಾಗಿ ಪ್ರತ್ಯಕ್ಷದರ್ಶಿಯೊಬ್ಬ ತಿಳಿಸಿರುವುದಾಗಿ ಅಧಿಕಾರಿಗಳು ಹೇಳಿದ್ದಾರೆ.
|