ಕಾನ್ಪುರದ ಥಾಣೆ ಬಜಾರಿಯಾದಲ್ಲಿ ಮಂಗಳವಾರ ಸಂಜೆ ಸೈಕಲ್‌ನಲ್ಲಿಟ್ಟ ಕಚ್ಚಾ ಬಾಂಬ್‌ವೊಂದು ಸ್ಫೋಟಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬುಧವಾರ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ನಿನ್ನೆ ನಡೆದ ಘಟನೆಯಲ್ಲಿ ಏಳು ಮಂದಿ ಗಾಯಗೊಂಡಿದ್ದು,ಪ್ರಕರಣಕ್ಕೆ ಸಂಬಂಧಿಸಿದಂತೆ ಅಂಗಡಿ ಮಾಲೀಕ ಸೇರಿದಂತೆ ಇಬ್ಬರನ್ನು ಬಂಧಿಸಿದ್ದು, ಮೂರನೇ ವ್ಯಕ್ತಿಗಾಗಿ ಶೋಧ ನಡೆಸುತ್ತಿರುವುದಾಗಿ ಹೇಳಿದ್ದಾರೆ.
ಈ ಬಗ್ಗೆ ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ಹರಿರಾಮ್ ಶರ್ಮಾ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದ್ದಾರೆ.
ಈ ಮೂರು ಮಂದಿಯೂ ಕಾನೂನು ಬಾಹಿರ ವ್ಯವಹಾರಗಳಲ್ಲಿ ತೊಡಗಿಕೊಂಡಿದ್ದು, ಅವರು ಕಚ್ಚಾಬಾಂಬ್ ಅನ್ನು ತಯಾರಿಸಿ ಮಾರಾಟ ಮಾಡುತ್ತಿರುವುದಾಗಿ ಪೊಲೀಸ್ ಮೂಲಗಳು ಹೇಳಿವೆ.
ಘಟನೆ ನಡೆದ ಸ್ಥಳದಲ್ಲಿಟ್ಟಿದ್ದ ಸೈಕಲ್ ಜನರಲ್ ಮರ್ಚಂಟ್ ಮಾಲೀಕ ಕಮಲ್ ಕುಮಾರ್ ಸಾಹುಗೆ ಸೇರಿದ್ದಾಗಿದ್ದು, ಆತನನ್ನು ಬಂಧಿಸಲಾಗಿದೆ. ಅಲ್ಲದೇ ಮತ್ತೊಬ್ಬ ಅಂಗಡಿ ಮಾಲೀಕ ಅತೀಕ್‌ನನ್ನೂ ಕೂಡ ಬಂಧಿಸಲಾಗಿದೆ. ಮೂರನೇ ವ್ಯಕ್ತಿ ಅಯ್ಯಾಜ್ ಬಂಧನಕ್ಕಾಗಿ ತೀವ್ರ ಶೋಧಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ವಿವರಿಸಿದ್ದಾರೆ. |