ಹುಟ್ಚುಹಬ್ಬದ ಸಂಭ್ರಮ ಮುಗಿಸಿ ಹಿಂತಿರುಗಿ ಬರುತ್ತಿದ್ದ ವಾಹನವೊಂದು ಆಳ ಕಣಿವೆಗೆ ಉರುಳಿ ಬಿದ್ದ ಪರಿಣಾಮ 9 ಮಂದಿ ಮೃತಪಟ್ಟು 17ಕ್ಕೂ ಹೆಚ್ಚು ಗಾಯಗೊಂಡ ಘಟನೆ ಹಿಮಾಚಲ ಪ್ರದೇಶದ ಮಾಂಡಿ ಜಿಲ್ಲೆಯಲ್ಲಿ ಬುಧವಾರ ರಾತ್ರಿ ಸಂಭವಿಸಿದೆ.
ರಸ್ತೆಯಲ್ಲಿನ ತಿರುವೊಂದನ್ನು ದಾಟಿಸುವಲ್ಲಿ ವಿಫಲನಾದ ಚಾಲಕ ವಾಹನದ ನಿಯಂತ್ರಣ ಕಳೆದುಕೊಂಡ ಪರಿಣಾಮ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 9 ಜನ ಸ್ಥಳದಲ್ಲೇ ಪ್ರಾಣ ಕಳೆದು ಕೊಂಡಿದ್ದಾರೆ ಎಂದು ಜಿಲ್ಲಾ ಎಸ್ಪಿ ಚಂದ್ರಶೇಖರ್ ತಿಳಿಸಿದ್ದಾರೆ.
ಗಂಭೀರವಾಗಿ ಗಾಯಗೊಂಡವರನ್ನು ಇಲ್ಲಿಂದ 150 ಕಿ.ಮೀ. ದೂರದಲ್ಲಿರುವ ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ. |