ಮಧ್ಯಪ್ರದೇಶದ ವಿಧಾನಸಭೆ ಚುನಾವಣೆಗಾಗಿ ಭಾರತೀಯ ಜನತಾ ಪಕ್ಷ 64 ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, 17 ಮಂದಿ ಹಾಲಿ ಶಾಸಕರಿಗೆ ಕೊಕ್ ನೀಡಲಾಗಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ನಾಲ್ಕು ಮಂದಿ ಸಂಸದರಾದ ಛತ್ತರ್ ಸಿಂಗ್ ದಾರ್ವಾರ್, ಸರ್ತಾಜ್ ಸಿಂಗ್, ಗೌರಿಶಂಕರ್ ವಿಶಾನ್ ಮತ್ತು ನೀತಾ ಪಟೆರಿಯಾ ಅವರುಗಳನ್ನು ಸೇರ್ಪಡೆ ಮಾಡಿ ಬಿಜೆಪಿ ಪಕ್ಷದ ಕೇಂದ್ರ ಚುನಾವಣಾ ಸಮಿತಿ ಅಭ್ಯರ್ಥಿಗಳ ಎರಡನೇ ಪಟ್ಟಿಯನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚವ್ಹಾಣ ಸಂಪುಟದಲ್ಲಿ ಸಚಿವರಾಗಿರುವ ಅನುಪ್ ಮಿಶ್ರಾ,ನಾರಾಯಣ್ ಸಿಂಗ್ , ರಾಮ್ ದಯಾಲ್ ಆಹಿರ್‌ವಾರ್ , ಕಮಲ್ ಪಟೇಲ್, ರಾಘವ್‌ಜಿ ಭಾಯಿ ಮತ್ತು ಲಕ್ಷ್ಮಿಕಾಂತ್ ಶರ್ಮಾ ಅವರಿಗೆ ಟಿಕೆಟ್ ನೀಡಲಾಗಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.
ಮಾಜಿ ಮುಖ್ಯಮಂತ್ರಿ ಬಾಬುಲಾಲ್ ಗೌರ್ ಗೋವಿಂದ್‌ಪುರ್ ಕ್ಷೇತ್ರದಿಂದ ಚುನಾವಣೆಯನ್ನು ಎದುರಿಸಲಿದ್ದಾರೆ.
ಬಿಜೆಪಿ ಮೊದಲ ಪಟ್ಟಿಯಲ್ಲಿ 115 ಅಭ್ಯರ್ಥಿಗಳ ಪಟ್ಟಿಯನ್ನು ಘೋಷಿಸಿದ್ದು ಉಳಿದ ಅಭ್ಯರ್ಥಿಗಳ ಪಟ್ಟಿಯನ್ನು ಮುಂದಿನ ದಿನಗಳಲ್ಲಿ ಪ್ರಕಟಿಸಲಾಗುವುದು ಎಂದು ಬಿಜೆಪಿ ವಕ್ತಾರರು ತಿಳಿಸಿದ್ದಾರೆ. |