ಮುಂಬೈಯಲ್ಲಿ ಉಗ್ರರು ಹಿಂದೆಂದೂ ಕಂಡುಕೇಳರಿಯದ ರೀತಿಯಲ್ಲಿ ನಡೆಸಿರುವ ಭಯೋತ್ಪಾದನಾ ದಾಳಿಯ ಹಿನ್ನೆಲೆಯಲ್ಲಿ, ರಾಷ್ಟ್ರಾದ್ಯಂತ ಕಟ್ಟೆಚ್ಚರ ವಹಿಸಲಾಗಿದೆ.
ಬುಧವಾರ ರಾತ್ರಿಯಿಂದ ನಡೆದಿರುವ ಉಗ್ರರ ಹೇಷಾರವದಲ್ಲಿ 101 ಮಂದಿ ಸಾವನ್ನಪ್ಪಿದ್ದು 250ಕ್ಕಿಂತಲೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಬಸ್‌ನಿಲ್ದಾಣಗಳು, ರೈಲ್ವೇ ನಿಲ್ದಾಣಗಳು, ವಿಮಾನ ನಿಲ್ದಾಣ, ಸಿನಿಮಾ ಥಿಯೇಟರ್‌ಗಳು ಹಾಗೂ ಇತರ ಸಾರ್ವಜನಿಕ ಸ್ಥಳಗಳಲ್ಲಿ ಸೂಕ್ಷ್ಮ ಪರಿಶೀಲನೆ ನಡೆಸಲಾಗುತ್ತಿದೆ. ಹೋಟೇಲುಗಳಿಗೂ ಭದ್ರತಾ ವ್ಯವಸ್ಥೆಗಳನ್ನು ಹೆಚ್ಚಿಸಲು ಆದೇಶ ನೀಡಲಾಗಿದೆ.
ರಾಜಧಾನಿ ದೆಹಲಿಯಲ್ಲಿ ಮುಂದಿನ 48 ಗಂಟೆಗಳಲ್ಲಿ ಮತದಾನ ನಡೆಯಲಿದ್ದು ಪೂರ್ಣ ಪ್ರಮಾಣದಲ್ಲಿ ಪೊಲೀಸರನ್ನು ನಿಯೋಜಿಸಲಾಗಿದೆ. ಕಳೆದ ಸೆಪ್ಟೆಂಬರ್ ತಿಂಗಳಲ್ಲಿ ದೆಹಲಿಯಲ್ಲಿ ಸರಣಿ ಸ್ಫೋಟ ಸಂಭವಿಸಿದೆ.
ಪರಿಸ್ಥಿತಿಯ ಕುರಿತು ತಮ್ಮ ಸಿಬ್ಬಂದಿಗಳಿಗೆ ಮಾಹಿತಿ ನೀಡಲಾಗಿದೆ. ಗರಿಷ್ಠ ನಿಯೋಜನೆಯ ಮೂಲಕ ಭದ್ರತೆಯನ್ನು ಹೆಚ್ಚಿಸಲಾಗಿದೆ. ಸಾರ್ವಜನಿಕ ಸ್ಥಳಗಳಲ್ಲಿ ತಪಾಸಣೆ ನಡೆಸಲಾಗುತ್ತಿದೆ ಎಂದು ದಹೆಲಿ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ತಮಿಳ್ನಾಡಿನಲ್ಲಿಯೂ ಪ್ರಮುಖ ಹೋಟೇಲುಗಳು ಮತ್ತು ಪೂಜಾ ಸ್ಥಳಗಳಲ್ಲಿ ಪೊಲೀಸ್ ಸಿಬ್ಬಂದಿಗಳನ್ನು ನಿಯೋಜಿಲಾಗಿದೆ.
ತಾರಾ ಹೋಟೇಲುಗಳು ಮತ್ತು ರೈಲ್ವೆ ನಿಲ್ದಾಣಗಳಲ್ಲಿ ಹೆಚ್ಚು ಪೊಲೀಸರನ್ನು ನೇಮಿಸಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. |