ಮುಂಬೈ ದಾಳಿಯ ಹಿಂದೆ ಕೆಲವು ಸಮಾಜಘಾತುಕ ಶಕ್ತಿಗಳು ಇದ್ದಿರುವುದಾಗಿ ತಿಳಿಸಿದ ವಿದೇಶಾಂಗ ಸಚಿವ ಪ್ರಣಬ್ ಮುಖರ್ಜಿ, ಪ್ರಾಥಮಿಕ ವರದಿಯನ್ವಯ ದಾಳಿಯ ಹಿಂದೆ ಪಾಕ್‌ನ ಕೈವಾಡ ಇರುವುದಾಗಿ ಹೇಳಿದರು.
ಸ್ಫೋಟ ಪ್ರಕರಣದ ಕುರಿತು ಪ್ರಧಾನಿ ಮನಮೋಹನ್ ಸಿಂಗ್, ಅವರು ಪಾಕ್ ಅಧ್ಯಕ್ಷ ಅಸಿಫ್ ಅಲಿ ಜರ್ದಾರಿ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ವಿವರಣೆ ನೀಡಿದರು.
ಪ್ರಾಥಮಿಕ ಮಾಹಿತಿಯಂತೆ, ಮುಂಬೈ ದಾಳಿಯ ಹೊಣೆಯನ್ನು ಕೆಲವು ಪಾಕ್ ಉಗ್ರಗಾಮಿ ಸಂಘಟನೆಗಳು ಹೊತ್ತಿರುವುದಾಗಿ ಮುಖರ್ಜಿ ಸುದ್ದಿಗಾರರೊಂದಿಗೆ ಮಾತನಾಡುತ್ತ ತಿಳಿಸಿದರು.
ಏತನ್ಮಧ್ಯೆ ದಾಳಿಗೆ ಸಂಬಂಧಿಸಿದ ಯಾವುದೇ ಸಾಕ್ಷ್ಯವನ್ನು ಬಹಿರಂಗಪಡಿಸುವುದಿಲ್ಲ ಎಂದು ವಿವರಿಸಿದ ಅವರು, ಭಾರತ ವಿರುದ್ಧ ಸಮಾಜಘಾತುಕ ಶಕ್ತಿಗಳು ನಡೆಸುವ ದಾಳಿಯನ್ನು ತಾನು ಬೆಂಬಲಿಸುವುದಿಲ್ಲ ಎಂದು ಪಾಕ್ ಭರವಸೆ ನೀಡಿರುವುದಾಗಿ ಹೇಳಿದರು.
|