ದತ್ತಪೀಠ ವಿವಾದಕ್ಕೆ ಸಂಬಂಧಿಸಿದಂತೆ ರಾಜ್ಯ ಹೈಕೋರ್ಟ್ ನೀಡಿದ್ದ ತೀರ್ಪಿಗೆ ಸುಪ್ರೀಂಕೋರ್ಟ್ ಸೋಮವಾರ ತಡೆಯಾಜ್ಞೆ ನೀಡಿದೆ.
ದತ್ತಪೀಠ ಪೂಜೆಯ ಕುರಿತಾಗಿ ರಾಜ್ಯ ಹೈಕೋರ್ಟ್ ಆಗೋಸ್ಟ್ 4ರಂದು ನೀಡಿದ್ದ ತೀರ್ಪಿನ ವಿರುದ್ಧ ಕೋಮು ಸೌಹಾರ್ದ ವೇದಿಕೆ ಸರ್ವೋಚ್ಚನ್ಯಾಯಾಲಯಕ್ಕೆ ಮೇಲ್ಮನವಿ ಸಲ್ಲಿಸಿತ್ತು.
ವಿವಾದದ ಕುರಿತು ನ್ಯಾಯಮೂರ್ತಿಗಳಾದ ರವೀಂದ್ರನ್ ಹಾಗೂ ಡಿ.ಕೆ.ಜೈನ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠ, ದತ್ತಪೀಠದ ಕುರಿತು 1989ರಲ್ಲಿ ದತ್ತಿ ಆಯುಕ್ತರು ನೀಡಿದ ಮಾರ್ಗಸೂಚಿಯನ್ನು ಅನುಸರಿಸುವಂತೆ ಸೂಚಿಸಿದ್ದು, ಮಧ್ಯಂತರ ಆದೇಶ ನೀಡುವವರೆಗೆ ಯಥಾಸ್ಥಿತಿಯನ್ನು ಕಾಪಾಡಿಕೊಳ್ಳುವಂತೆ ಸೂಚಿಸಿದೆ. |