ಮುಂಬೈ ದಾಳಿ ಪ್ರಕರಣಕ್ಕೆ ಸಂಬಂಧಿಸಿದಂತೆ ಕೋಲ್ಕತಾ ಪೊಲೀಸರು ಶನಿವಾರ ಬೆಳಿಗ್ಗೆ ಇಬ್ಬರು ಶಂಕಿತ ಆರೋಪಿಗಳನ್ನುಬಂಧಿಸಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಉಗ್ರರಿಗೆ ಸಿಮ್ ಕಾರ್ಡ್ ಒದಗಿಸಿದ ಆರೋಪದ ಮೇಲೆ ಓರ್ವನನ್ನು ಪಶ್ಚಿಮಬಂಗಾಳ ಹಾಗೂ ಮತ್ತೋರ್ವನನ್ನು ದೆಹಲಿಯಲ್ಲಿ ಬಂಧಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿಗಳು ಹೇಳಿದ್ದಾರೆ.
ಬಂಧಿತರನ್ನು ಶೌಸಿಫ್ ರೆಹಮಾನ್ ಹಾಗೂ ಮುಕ್ತಾರ್ ಅಹ್ಮದ್ ಎಂದು ಗುರುತಿಸಲಾಗಿದೆ. ನ.26ರಂದು ವಾಣಿಜ್ಯ ನಗರಿ ಮುಂಬೈಯಲ್ಲಿ ಉಗ್ರರು ನಡೆಸಿದ ಭಯೋತ್ಪಾದನಾ ದಾಳಿ ಕುರಿತು ತೀವ್ರ ಶೋಧ ಕಾರ್ಯಾಚರಣೆ ನಡೆಸುತ್ತಿರುವ ಪೊಲೀಸರು ಇದೀಗ ಮತ್ತಿಬ್ಬರನ್ನು ಬಂಧಿಸಿದೆ.
ಈಗಾಗಲೇ ದಾಳಿಯ ಸಂದರ್ಭದಲ್ಲಿ ಅಜ್ಮಲ್ ಎಂಬಾತ ಸೆರೆ ಸಿಕ್ಕಿದ್ದು, ಆತನನ್ನು ಎಟಿಎಸ್ ಹಾಗೂ ಅಮೆರಿಕದ ಎಫ್‌ಬಿಐ ಅಧಿಕಾರಿಗಳು ತನಿಖೆಗೆ ಒಳಪಡಿಸುವ ಮೂಲಕ ಸಾಕಷ್ಟು ಮಹತ್ವದ ಮಾಹಿತಿಗಳನ್ನು ಕಲೆಹಾಕಿದ್ದಾರೆ. |