ಕಣಿವೆ ರಾಜ್ಯದ ನಾಲ್ಕನೇ ಹಂತದ ಮತದಾನ ಭಾನುವಾರ ಬೆಳಿಗ್ಗೆ ಆರಂಭಗೊಂಡಿದ್ದರೆ, ಮತ್ತೊಂದೆಡೆ ಪೀಪಲ್ಸ್ ಡೆಮೊಕ್ರಟಿಕ್ ಪಾರ್ಟಿ (ಪಿಡಿಪಿ) ಹಾಗೂ ನ್ಯಾಷನಲ್ ಕಾನ್ಫ್‌ರೆನ್ಸ್ ಕಾರ್ಯಕರ್ತರ ನಡುವೆ ನಡೆದ ಮಾರಾಮಾರಿಯಲ್ಲಿ ಓರ್ವ ವ್ಯಕ್ತಿ ಸಾವನ್ನಪ್ಪಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ದಕ್ಷಿಣ ಕಾಶ್ಮೀರದ ಕುಲ್‌ಗಾಮ್ ಜಿಲ್ಲೆಯಲ್ಲಿ ಡಿಸೆಂಬರ್ 17ರಂದು ಚುನಾವಣೆ ನಡೆಯಲಿದ್ದು, ಅದರ ಪೂರ್ವಭಾವಿಯಾಗಿ ನಡೆಯುತ್ತಿದ್ದ ಮತಪ್ರಚಾರದ ಸಂದರ್ಭದಲ್ಲಿ ಇಂದು ಬೆಳಿಗ್ಗೆ ನಡೆದ ಘರ್ಷಣೆಯಲ್ಲಿ ಓರ್ವ ಬಲಿಯಾಗಿದ್ದಾನೆ.
ಈ ಘರ್ಷಣೆಯಲ್ಲಿ ಪಿಡಿಪಿ ವ್ಯಕ್ತಿಯೊಬ್ಬ ಸಾವನ್ನಪ್ಪಿದ್ದಾನೆ. ಕುಲ್‌ಗಾಮ್ ಜಿಲ್ಲೆಯ ನೂರಾಬಾದ್ ನಗರದಲ್ಲಿ ಪ್ರಚಾರ ಕಾರ್ಯ ನಡೆಸುತ್ತಿದ್ದ ಸಂದರ್ಭದಲ್ಲಿ ಇತ್ತಂಡಗಳ ನಡುವೆ ಮಾರಾಮಾರಿ ನಡೆದ ಪರಿಣಾಮ ದುರ್ಘಟನೆ ಸಂಭವಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನು ಬಂಧಿಸಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. |