ಜೈಪುರ: ರಾಜಸ್ಥಾನದಲ್ಲಿ ಮುಖ್ಯಮಂತ್ರಿಯಾಗಿ ಎರಡನೇ ಬಾರಿಗೆ ಅಶೋಕ್ ಗೆಹ್ಲೋಟ್ ಆಯ್ಕೆಯಾಗಿದ್ದಾರೆ.
ಗುರುವಾರ ನಡೆದ ಕಾಂಗ್ರೆಸ್ ಶಾಸಕಾಂಗ ಸಭೆಯಲ್ಲಿ ಗೆಹ್ಲೋಟ್ ಅವರನ್ನು ಆಯ್ಕೆಮಾಡಲಾಗಿದ್ದು, ಅಧಿಕೃತ ಘೋಷಣೆ ಇನ್ನಷ್ಟೆ ಹೊರಬೀಳಬೇಕಿದೆ. ಅವರು ಶನಿವಾರ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ ಎಂದು ಸಮೀಪದ ಮೂಲಗಳು ತಿಳಿಸಿವೆ.
ಶಾಸಕರ ನಿಕಟ ಸಮಾಲೋಚನೆ ಬಳಿಕ ಗೆಹ್ಲೋಟ್ ಅವರನ್ನು ಆಯ್ಕೆ ಮಾಡಲಾಗಿದೆ ಎಂದು ಎಐಸಿಸಿ ವೀಕ್ಷಕ ದಿಗ್ವಿಜಯ್ ಸಿಂಗ್ ಹೇಳಿದ್ದಾರೆ.
ಎಲ್ಲಾ ವರ್ಗಗಳು, ಜಾತಿ, ಸಮುದಾಯದ ಜನತೆಗೆ ಸಹಾಯವಾಗುವಂತಹ ಸಮರ್ಥ, ಪಾರದರ್ಶಕ ಮತ್ತು ದಕ್ಷ ಅಧಿಕಾರವನ್ನು ನೀಡುವುದಾಗಿ ಗೆಹ್ಲೋಟ್ ಹೇಳಿದ್ದಾರೆ.
|