ವಾರಂಗಲ್ ಎಂಜಿನಿಯರಿಂಗ್ ಕಾಲೇಜು ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎಸೆದ ಮೂವರು ಆರೋಪಿಗಳು ಪೊಲೀಸರ ಗುಂಡಿಗೀಡಾಗಿದ್ದಾರೆ. ಪರಾರಿಯಾಗಲು ಯತ್ನಿಸಿದ ಆರೋಪಿಗಳು ಎನ್‌ಕೌಂಟರ್‌ನಲ್ಲಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.
ಹುಡುಗಿಯರ ಮೇಲೆ ಆಸಿಡ್ ಎರಚಿದ ಸ್ಥಳಕ್ಕೆ ಕರೆದೊಯ್ಯಲು ಯತ್ನಿಸಿದ ವೇಳೆ ಮೂವರು ಆರೋಪಿಗಳು ಪರಾರಿಯಾಗಲು ಯತ್ನಿಸಿದಾಗ ಅವರ ಮೇಲೆ ಗುಂಡು ಹಾರಿಸಬೇಕಾಯಿತು ಎಂದು ಪೊಲೀಸರು ಹೇಳಿದ್ದಾರೆ.
ದಾಳಿಗೀಡಾಗಿರುವ ಹುಡುಗಿಯರ ಹೇಳಿಕೆ ಆಧಾರದಲ್ಲಿ ಈ ಮೂವರನ್ನು ಶುಕ್ರವಾರ ಪತ್ರಿಕಾ ಗೋಷ್ಠಿಯಲ್ಲಿ ಹಾಜರು ಪಡಿಸಲಾಗಿತ್ತು. ಪತ್ರಿಕಾ ಗೋಷ್ಠಿಯಲ್ಲಿ ಈ ಮೂವರು ತಪ್ಪೊಪ್ಪಿಕೊಂಡಿದ್ದರು. ಇವರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂಬುದಾಗಿ ಸಾರ್ವಜನಿಕರು ಪೊಲೀಸರ ಮೇಲೆ ತೀವ್ರ ಒತ್ತಡ ಹೇರಿದ್ದರು.
ವಿದ್ಯಾರ್ಥಿನಿಯರ ಮೇಲೆ ಆಸಿಡ್ ಎರಚಿದ ಪ್ರಕರಣವು ಸಾರ್ವಜನಿಕರಿಗೆ ಆಘಾತ ಉಂಟು ಮಾಡಿತ್ತು ಮತ್ತು ಆಕ್ರೋಶ ಹುಟ್ಟಿಸಿತ್ತು. |