ಮಧ್ಯಪ್ರದೇಶದ ಅಶೋಕ್ ನಗರ ಜಿಲ್ಲೆಯಲ್ಲಿ ಸಂಭವಿಸಿರುವ ಬಸ್ ಅಪಘಾತದಲ್ಲಿ 20 ಮಂದಿ ಪ್ರಯಾಣಿಕರು ಜೀವಂತ ದಹನಾಗಿರುವ ದಾರುಣ ಘಟನೆ ಸಂಭವಿಸಿದೆ.
ಬಸ್ ವಿದ್ಯುತ್ ಕಂಬಕ್ಕೆ ಡಿಕ್ಕಿ ಹೊಡೆದಿತ್ತು. ಕಂಬವು ಬಸ್ಸಿನ ಮೇಲೆ ಉರುಳಿ ಬಿದ್ದ ಪರಿಣಾಮ ಬಸ್ಸಿಗೆ ಬೆಂಕಿ ಹತ್ತಿಕೊಂಡಿತ್ತು.
ಅಪಘಾತದಲ್ಲಿ ಇತರ ಹದಿನೈದು ಪ್ರಯಾಣಿಕರು ತೀವ್ರ ಗಾಯಗೊಂಡಿದ್ದು, ಇವರಲ್ಲಿ ಏಳು ಮಂದಿಯ ಪರಿಸ್ಥಿತಿ ಗಂಭೀರವಾಗಿದೆ. ಗಾಯಳುಗಳನ್ನು ಸಮೀಪದ ಆಸ್ಪತ್ರೆಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ. |