ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹುಟ್ಟಿದ ಹಬ್ಬದ ನಿಮಿತ್ಯ ಹಣ ನೀಡುವಂತೆ ಒತ್ತಾಯಿಸಿ ಬಿಎಸ್‌ಪಿ ಶಾಸಕ ಪಿಡಬ್ಲೂಡಿ ಇಂಜೀನಿಯರ್‌ಗೆ ಚಿತ್ರಹಿಂಸೆ ನೀಡಿ ಹತ್ಯೆಗೆ ಕಾರಣವಾದ ಹಿನ್ನೆಲೆಯಲ್ಲಿ ಸಮಾಜವಾದಿ ಪಕ್ಷ ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಿದೆ.
ಸಮಾಜವಾದಿ ಪಕ್ಷದ ಕಾರ್ಯಕರ್ತರು ಹೆದ್ದಾರಿ ರಸ್ತೆ ಹಾಗೂ ಅಂಗಡಿ ಮುಗ್ಗಟ್ಟುಗಳನ್ನು ಮುಚ್ಚುವಂತೆ ಒತ್ತಾಯಿಸಿದ್ದರಿಂದ ಉದ್ರಿಕ್ತ ವಾತಾವರಣ ನಿರ್ಮಾಣವಾಗಿದ್ದರಿಂದ ಹಿಂಸಾಚಾರವನ್ನು ತಡೆಯಲು ಪೊಲೀಸರು ನಿಷೇದಾಜ್ಞೆಯನ್ನು ಹೇರಿದ್ದಾರೆ ಎಂದು ಮೂಲಗಳು ತಿಳಿಸಿವೆ.
ಬಿಎಸ್‌ಪಿ ಶಾಸಕ ತಿವಾರಿ ಹಾಗೂ ಆತನ ಬೆಂಬಲಿಗರು ಸರಕಾರಿ ಅಧಿಕಾರಿಯ ನಿವಾಸವನ್ನು ಪ್ರವೇಶಿಸಿ ಚಿತ್ರಹಿಂಸೆ ನೀಡಿ ಹತ್ಯೆ ಮಾಡಿರುವುದನ್ನು ವಿರೋಧಿಸಿ ರಾಜ್ಯದಾದ್ಯಂತ ಬಂದ್‌ಗೆ ಕರೆ ನೀಡಲಾಗಿದೆ ಎಂದು ಸಮಾಜವಾದಿ ಪಕ್ಷದ ಕಾರ್ಯದರ್ಶಿ ಅಮರ್‌ಸಿಂಗ್ ಹೇಳಿದ್ದಾರೆ.
ಆದರೆ ಜಿಲ್ಲಾಡಳಿತ ಇಂಜೀನಿಯರ್ ಹತ್ಯೆಗೆ ಉತ್ತರ ಪ್ರದೇಶದ ಮುಖ್ಯಮಂತ್ರಿಗೆ ಯಾವುದೇ ರೀತಿಯ ಸಂಬಂಧವಿಲ್ಲ ಎಂದು ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಘಟನೆಗೆ ಕಾರಣಿಭೂತರಾದ ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ವಿರುದ್ಧ ಸೂಕ್ತ ಕಠಿಣ ಕ್ರಮಕೈಗೊಳ್ಳುವಂತೆ ಸಮಾಜವಾದಿ ಪಕ್ಷದ ಮುಖಂಡ ಮುಲಾಯಂ ಸಿಂಗ್ ಯಾದವ್ ಕೇಂದ್ರ ಸರಕಾರವನ್ನು ಒತ್ತಾಯಿಸಿದ್ದಾರೆ. |