ಮುಖ್ಯ ಕಾರ್ಯನಿರ್ವಾಹಕ ಇಂಜಿನಿಯರ್ ಅವರನ್ನು ಅಮಾನುಷವಾಗಿ ಹತ್ಯಗೈದ ಪ್ರಕರಣವನ್ನು ವಿರೋಧಿಸಿ ಸಮಾಜವಾದಿ ಪಕ್ಷ ನೀಡಿದ ಬಂದ್ ಕರೆ ಹಿಂಸಾಚಾರಕ್ಕೆ ತಿರುಗಿದ ಹಿನ್ನೆಲೆಯಲ್ಲಿ ಪೊಲೀಸರು ಗೋಲಿಬಾರ್ ನಡೆಸಿದ್ದು ಹಲವಾರು ಮಂದಿಗೆ ಗಾಯಗಳಾಗಿವೆ ಎಂದು ಮೂಲಗಳು ತಿಳಿಸಿವೆ.
ಉದ್ರಿಕ್ತ ಪ್ರತಿಭಟನಾಕಾರರನ್ನು ಚದುರಿಸಲು ಪೊಲೀಸರು ಲಾಠಿಚಾರ್ಜ್ ಗೋಲಿಬಾರ್ ನಡೆಸಿದ್ದು, ಪಕ್ಷದ ಮುಖಂಡರಾದ ಮುಲಾಯಂಸಿಂಗ್ ಯಾದವ್, ಅಖಿಲೇಶ್ ಯಾದವ್ ಮತ್ತು ರಾಜ್ಯಾದ್ಯಕ್ಷ ಶಿವಪಾಲ್ ಯಾದವ್ ಅವರನ್ನು ಪೊಲೀಸರು ಬಂದಿಸಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಉತ್ತರ ಪ್ರದೇಶದ ಮುಖ್ಯಮಂತ್ರಿ ಮಾಯಾವತಿಯವರ ಹುಟ್ಟು ಹಬ್ಬಕ್ಕೆ 50 ಲಕ್ಷ ರೂ.ದೇಣಿಗೆ ನೀಡುವಂತೆ ಒತ್ತಾಯಿಸಿ ಇಂಜಿನಿಯರ್ ಗುಪ್ತಾ ಅವರಿಗೆ ವಿದ್ಯುತ್ ಶಾಖ್ ನೀಡಿದ್ದಲ್ಲದೇ ದೇಹದ ತುಂಬಾ ಸುಮಾರು 32 ಕಡೆ ಗಾಯಗಳನ್ನು ಮಾಡಿ, ಚಿತ್ರಹಿಂಸೆ ನೀಡಿ ಸಾವಿಗೆ ಆರೋಪಿಗಳು ಕಾರಣವಾಗಿದ್ದಾರೆ ಎಂದು ಸಮಾಜವಾದಿ ಪಕ್ಷದ ಮುಖಂಡರು ಆರೋಪಿಸಿದ್ದಾರೆ.
ಸಮಾಜವಾದಿ ಪಕ್ಷದ ಕಾರ್ಯಕರ್ತರು ರಾಜ್ಯದಾದ್ಯಂತ ರೈಲು ತಡೆ ರಸ್ತೆ ತಡೆ ನಡೆಸಿದ್ದರಿಂದ ಜನಜೀವನ ಅಸ್ತವ್ಯಸ್ತವಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ. |