ಕ್ರಿಸ್‌ಮಸ್ ಮತ್ತಪ ಹೊಸ ವರ್ಷದ ಆಚರಣೆಯ ಸಂದರ್ಭದಲ್ಲಿ ಉಗ್ರರು ದಾಳಿ ನಡೆಸಲು ಸಂಚು ರೂಪಿಸಿದ್ದಾರೆ ಎನ್ನುವ ಗುಪ್ತಚರ ವರದಿಗಳ ಹಿನ್ನೆಲೆಯಲ್ಲಿ ಗೋವಾ ರಾಜ್ಯದಾದ್ಯಂತ ಭಾರಿ ಬಿಗಿ ಭಧ್ರತೆ ಏರ್ಪಡಿಸಲಾಗಿದೆ ಎಂದು ಪೊಲೀಸ್ ಮೂಲಗಳು ತಿಳಿಸಿವೆ.
ರಾಜ್ಯ ಸರಕಾರ ಬೀಚ್ ಪಾರ್ಟಿಗಳನ್ನು ನಿಷೇಧಿಸಿ ಆದೇಶ ಹೊರಡಿಸಿದ್ದು ಸಂಶಯಾಸ್ಪದ, ಅಪರಿಚಿತ ವ್ಯಕ್ತಿಗಳ ಕುರಿತಂತೆ ಜಾಗರೂಕರಾಗಿರುವಂತೆ ನಾಗರಿಕರಿಗೆ ಮನವಿ ಮಾಡಿದೆ.
ಗೋವಾದಾದ್ಯಂತ 700 ಅರೆಸೇನಾಪಡೆಗಳು 5 ಸಾವಿರಕ್ಕೂ ಹೆಚ್ಚು ಪೊಲೀಸರನ್ನು ಭಧ್ರತೆಗಾಗಿ ನಿಯೋಜಿಸಲಾಗಿದೆ ಎಂದು ಸರಕಾರದ ಉನ್ನತ ಮೂಲಗಳು ತಿಳಿಸಿವೆ.
ರಾಜ್ಯದಾದ್ಯಂತ ಪೊಲೀಸರು ಮತ್ತು ಭಧ್ರತಾ ಪಡೆಗಳ ವ್ಯವಸ್ಥೆಯಿಂದಾಗಿ ಪ್ರವಾಸಿಗರ ಮೇಲೆ ಪ್ರತಿಕೂಲ ಪರಿಣಾಮ ಬೀರುವುದರಿಂದ ಪ್ರವಾಸಿಗರ ಸಂಖ್ಯೆಯಲ್ಲಿ ಇಳಿಕೆಯಾಗಲಿದೆ ಎಂದು ಪ್ರವಾಸೋದ್ಯಮ ಮೂಲಗಳು ತಿಳಿಸಿವೆ. |