ಅಸ್ಸಾಂನ ಪ್ರಸಿದ್ಧ ಕಾಮಾಕ್ಯಾ ಹಿಲ್ಸ್ ಪ್ರದೇಶ ಸಮೀಪದ ಜನನಿಬಿಡ ಮಾಲಿಗಾಂವ್ ಪ್ರದೇಶದಲ್ಲಿ ಶುಕ್ರವಾರ ಉಗ್ರರು ಅಡಗಿಸಿಟ್ಟ ಪ್ರಬಲ ಬಾಂಬ್ ಸ್ಫೋಟಗೊಂಡ ಪರಿಣಾಮ ಇಬ್ಬರು ಸಾವನ್ನಪ್ಪಿದ್ದು,ಐದು ಜನರು ಗಾಯಗೊಂಡಿರುವುದಾಗಿ ಪೊಲೀಸ್ ಮೂಲಗಳು ತಿಳಿಸಿವೆ.
ಇಂದು ಸಂಜೆ 6.15ರ ಸುಮಾರಿಗೆ ಜನನಿಬಿಡ ಮಾರುಕಟ್ಟೆ ಪ್ರದೇಶದ ಸಮೀಪ ಸ್ಫೋಟ ಸಂಭವಿಸಿರುವುದಾಗಿ ಅಸ್ಸಾಂ ಪೊಲೀಸ್ ವಕ್ತಾರರಾದ ಜಯಶ್ರೀ ಅವರು ಪಿಟಿಐಗೆ ಹೇಳಿದ್ದಾರೆ.
ಮಾರುಕಟ್ಟೆ ಸಮೀಪ ನಿಲ್ಲಿಸಿದ್ದ ಸೈಕಲ್‌ನಲ್ಲಿ ಬಾಂಬ್ ಅನ್ನು ಇಡಲಾಗಿತ್ತು ಎಂದು ಪೊಲೀಸ್ ಮೂಲಗಳು ವಿವರಿಸಿವೆ. ಘಟನೆಯಲ್ಲಿ ಗಾಯಗೊಂಡವರನ್ನು ಸಮೀಪದ ರೈಲ್ವೆ ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಲ್ಲಿ ಕೆಲವರ ಸ್ಥಿತಿ ಗಂಭೀರವಾಗಿದೆ. ಆದರೆ ಸ್ಫೋಟದಲ್ಲಿ ಎಷ್ಟು ಮಂದಿ ಸಾವನ್ನಪ್ಪಿದ್ದಾರೆ ಎಂಬ ಖಚಿತ ಮಾಹಿತಿ ಲಭ್ಯವಾಗಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಲ್ಲದೇ ಬಾಂಬ್ ಸ್ಫೋಟಕ್ಕೆ ಸಂಬಂಧಿಸಿದಂತೆ ಯಾವುದೇ ಸಂಘಟನೆಗಳು ಹೊಣೆ ಹೊತ್ತುಕೊಂಡಿಲ್ಲ. ಹೊಸ ವರ್ಷದ ದಿನದಂದೇ ಸರಣಿ ಬಾಂಬ್ ಸ್ಫೋಟ ಸಂಭವಿಸಿದ್ದು,5ಮಂದಿ ಬಲಿಯಾಗಿದ್ದರು. |