'ರಾಷ್ಟ್ರೀಯ ಭದ್ರತೆಯಲ್ಲಿ ಭಾರತದ ಪಾತ್ರ' ಕುರಿತ ವಿಚಾರ ಸಂಕಿರಣ ಉದ್ಫಾಟಿಸಿ ಮಾತನಾಡಿದ ಕೇಂದ್ರ ಗೃಹ ಖಾತೆ ರಾಜ್ಯ ಸಚಿವ ಶ್ರೀ ಪ್ರಕಾಶ್ ಜೈಸ್ವಾಲ್ ಅವರು ಮುಂಬೈ ಭಯೋತ್ಪಾದಕ ದಾಳಿ ಸಂಬಂಧ ಉದ್ಯಮಿಗಳಲ್ಲಿ ಉಂಟಾಗಿರುವ ಭಯವನ್ನು ಹೋಗಲಾಡಿಸಲು ಸರ್ಕಾರ ಸರ್ವಸನ್ನದ್ಧವಾಗಿದ್ದು, ರಕ್ಷಣಾ ವ್ಯವಸ್ಥೆ ಇನ್ನಷ್ಟು ಬಲಗೊಳಿಸಲಾಗುತ್ತಿದೆ ಅಲ್ಲದೆ ಕಾರ್ಪೋರೇಟ್ ಸಂಸ್ಥೆಗಳಲ್ಲಿ ಅಂತರಾಷ್ಟ್ರೀಯ ಭದ್ರತೆ ಒದಗಿಸುವುದು ಸಹ ಸರ್ಕಾರದ ಕರ್ತವ್ಯವಾಗಿದ್ದು, ಅದಕ್ಕೆ ನಾವು ಬದ್ಧರಾಗಿದ್ದೇವೆ ಎಂದು ತಿಳಿಸಿದರು. |