ಸತ್ಯಂ ಕಂಪ್ಯೂಟರ್ ಸಂಸ್ಥೆಯ ಮಹಾವಂಚನೆಯ ಪ್ರಕರಣದ ಕುರಿತಂತೆ ಸ್ಥಾಪಕ ಬಿ.ರಾಮಲಿಂಗಾರಾಜು ಹಾಗೂ ಸಹೋದರ ರಾಮರಾಜುವನ್ನು ಚಂಚಲಾಗುಡ ಜೈಲಿನಲ್ಲಿ ಸೆಬಿ ಅಧಿಕಾರಿಗಳು ತೀವ್ರ ವಿಚಾರಣೆಗೆ ಗುರಿಪಡಿಸಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ಮತ್ತಷ್ಟು ಜನರನ್ನು ಬಂಧಿಸುವ ಸಾಧ್ಯತೆ ಇರುವುದಾಗಿ ಆಂಧ್ರಪ್ರದೇಶ ಪೊಲೀಸರು ತಿಳಿಸಿದ್ದಾರೆ.
ಸತ್ಯಂ ಕಂಪ್ಯೂಟರ್‌ನ ಮಾಜಿ ಮುಖ್ಯಸ್ಥ ರಾಮಲಿಂಗಾ ರಾಜುವಿನ ಮನೆ ಮತ್ತು ಕಚೇರಿಯಿಂದ ವಶಪಡಿಸಿಕೊಂಡ ದಾಖಲೆಗಳು ಮತ್ತು ಹಾರ್ಡ್ ಡಿಸ್ಕ್‌ಗಳನ್ನು ಕೂಲಂಕಷವಾಗಿ ಪರಿಶೀಲಿಸುತ್ತಿರುವುದಾಗಿ ಸಿಐಡಿಯ ಹಿರಿಯ ಅಧಿಕಾರಿಯೊಬ್ಬರು ಗುರುವಾರ ತಿಳಿಸಿದ್ದಾರೆ.
ಸುಮಾರು 25ಟ್ರಂಕ್‌ಗಳಷ್ಟು ದಾಖಲೆಗಳನ್ನು ವಶಪಡಿಸಿಕೊಳ್ಳಲಾಗಿದ್ದು, ನಾವು ಹಾಗೂ ಆರ್ಥಿಕ ತಜ್ಞರು ಸೇರಿ ಸೂಕ್ಷ್ಮವಾಗಿ ಪರಿಶೀಲಿಸುತ್ತಿರುವುದಾಗಿ ವಿವರಿಸಿದ್ದಾರೆ.
ತನಿಖೆಗಾಗಿ ನ್ಯಾಷನಲ್ ಇನ್‌ಫಾರ್ಮೆಟಿಕ್ ಸೆಂಟರ್(ಎನ್‌ಐಸಿ)ನ ತಜ್ಞರು, ವಿಧಿವಿಜ್ಞಾನ ಪ್ರಯೋಗಾಲಯದ ತಜ್ಞರು ಹಾಗೂ ಆದಾಯ ತೆರಿಗೆ ಅಧಿಕಾರಿಗಳು ಸಹಕರಿಸುತ್ತಿರುವುದಾಗಿ ಹೇಳಿದರು. |