ಶ್ವಾಸಕೋಶದ ಸೋಂಕಿನಿಂದ ಬಳಲುತ್ತಿರುವ ಮಾಜಿ ಪ್ರಧಾನಿ ಅಟಲ್ ಬಿಹಾರಿ ವಾಜಪೇಯಿ ಅವರ ಆರೋಗ್ಯ ಚೇತರಿಕೆ ಕಂಡಿರುವುದಾಗಿ ಏಮ್ಸ್ ವೈದ್ಯರು ತಿಳಿಸಿದ್ದಾರೆ.
ಶ್ವಾಸಕೋಶದ ಸೋಂಕಿನಿಂದ ತೀವ್ರವಾಗಿ ಬಳಲುತ್ತಿದ್ದ ಅವರು ಏಮ್ಸ್ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದು, ವಾಜಪೇಯಿ ಅವರ ಆರೋಗ್ಯ ಸುಧಾರಿಸುತ್ತಿದ್ದು, ಚಿಕಿತ್ಸೆಗೆ ಸ್ಪಂದಿಸುತ್ತಿರುವುದಾಗಿ ಏಮ್ಸ್ನ ವರಿಷ್ಠರಾದ ಡಾ.ಡಿ.ಕೆ.ಶರ್ಮಾ ಸೋಮವಾರ ಹೇಳಿದ್ದಾರೆ.
ಶುಕ್ರವಾರ ಮತ್ತು ಶನಿವಾರ ವಾಜಪೇಯಿ ಅವರ ಆರೋಗ್ಯ ತೀವ್ರ ಹದಗೆಟ್ಟಿತ್ತು. ಆದರೆ ಇದೀಗ ಅವರು ಚೇತರಿಸಿಕೊಳ್ಳುತ್ತಿದ್ದು, ಚಿಕಿತ್ಸೆಗೆ ದೇಹ ಸ್ಪಂದಿಸುತ್ತಿರುವುದಾಗಿ ಹೃದಯ ತಜ್ಞ ಡಾ.ಸಂಪತ್ ಕುಮಾರ್ ವಿವರಿಸಿದ್ದಾರೆ. |