ಚುನಾವಣೆಯು ಸಮೀಪಿಸುತ್ತಿದ್ದಂತೆಯೇ ಬಿಜೆಪಿ ಅಯೋಧ್ಯೆ ರಾಮ ಮಂದಿರದ ವಿಷಯವನ್ನು ಎತ್ತಿ ಹಿಡಿದು ಜನರ ಮನವೊಲಿಸುವ ನಾಟಕ ಆಡುತ್ತಿದೆ. ಅದೇ ವೇಳೆ ಅಯೋಧ್ಯೆ ಸಮಸ್ಯೆಯು ಬಿಜೆಪಿಯ ಚುನಾವಣಾ ತಂತ್ರವಾಗಿದೆ ಎಂದು ಬಿಎಸ್ಪಿ ನಾಯಕಿ ಮಾಯಾವತಿ ಟೀಕಿಸಿದ್ದಾರೆ.
ಚುನಾವಣೆ ಸಮೀಪಿಸುತ್ತಿದ್ದಂತೆ ಬಿಜೆಪಿ ರಾಮ ಮಂದಿರ ನಿರ್ಮಾಣದ ಯೋಜನೆಯ ಬಗ್ಗೆ ಚಿಂತಿಸುತ್ತಿದೆ. ಆದರೆ ಜನರಿಗೆ ಇವರ ನೈಜ ಬಣ್ಣ ತಿಳಿದಿದೆ. ಇದೊಂದು ಹಾಸ್ಯಾಸ್ಪದ ಸಂಗತಿ ಎಂದ ಅವರು, ಈ ಮೊದಲು ಬಿಜೆಪಿ ಸರ್ಕಾರ ಕೇಂದ್ರದಲ್ಲಿ ಆಳ್ವಿಕೆ ನಡೆಸುತ್ತಿರುವಾಗ ಯಾಕಾಗಿ ರಾಮ ಮಂದಿರ ನಿರ್ಮಿಸಿಲ್ಲ?ಎಂದು ಪ್ರಶ್ನಿಸಿದ್ದಾರೆ.
ಕೇಂದ್ರದಲ್ಲಿ ತಾವು ಅಧಿಕಾರಕ್ಕೆ ಬಂದರೆ ಶ್ರೀರಾಮ ಮಂದಿರ ನಿರ್ಮಿಸುವುದಾಗಿ ನಾಗ್ಪುರದಲ್ಲಿ ನಡೆದ ಬಿಜೆಪಿ ಸಮಾವೇಶದಲ್ಲಿ ಪಕ್ಷ ಹೇಳಿಕೆ ನೀಡಿತ್ತು. ಆದರೆ ಇದೊಂದು ಚುನಾವಣಾ ಗಿಮಿಕ್ ಎಂದು ಬಿಎಸ್ಪಿ ತಿರುಗೇಟು ನೀಡಿದೆ.
ಬಾಬ್ರಿ ಮಸೀದಿ ಧ್ವಂಸಕ್ಕೆ ಕಾರಣರಾದ ಕಲ್ಯಾಣ್ ಸಿಂಗ್ ಜೊತೆಗೆ ಸಮಾಜವಾದಿ ಪಕ್ಷದ ಮುಖ್ಯಸ್ಥರು ಕೈಜೋಡಿಸಿದ್ದಾರೆ ಎಂದು ಸಮಾಜವಾದಿ ಪಕ್ಷವನ್ನು ಕೂಡ ಮಾಯಾ ಈ ಸಂದರ್ಭದಲ್ಲಿ ತರಾಟೆಗೆ ತೆಗೆದುಕೊಂಡಿದ್ದಾರೆ. |