ಕಾಂಗ್ರೆಸ್ ಜತೆ ಚುನಾವಣಾಪೂರ್ವ ಮೈತ್ರಿ ಇಲ್ಲವೇ ಇಲ್ಲ ಎಂದು ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡರು, ಚುನಾವಣೋತ್ತರ ಮೈತ್ರಿ ಬಗ್ಗೆ ತುಟಿ ಬಿಚ್ಚಿಲ್ಲ.
ನಮ್ಮದು ಛೋಟಾ ಮೋಟಾ ಪಾರ್ಟಿ, ನಮ್ಮನ್ನು ಯಾರು ಕೇಳುತ್ತಾರೆ?ಚುನಾವಣೆ ನಂತರ ಏನಾಗುತ್ತೋ ಕಾದು ನೋಡುವಾ ಎಂದು ಹೇಳಿದರು.
ಶನಿವಾರ ಇಲ್ಲಿ ನಡೆದ ಜೆಡಿಎಸ್ ರಾಷ್ಟ್ರೀಯ ಕಾರ್ಯಕಾರಿ ಸಮಿತಿ ಸಭೆಯ ನಂತರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಮುಂದಿನ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ಹೊರತುಪಡಿಸಿ ಬೇರೆ ಪಕ್ಷಗಳ ಜತೆ ಹೊಂದಾಣಿಕೆಗೆ ಪಕ್ಷ ಸಿದ್ದ. ಕರ್ನಾಟಕದಲ್ಲಿ ಮಾತ್ರ ನಮ್ಮ ಪಕ್ಷ ಏಕಾಂಗಿಯಾಗಿಯೇ ಹೋರಾಟ ನಡೆಸಲಿದೆ ಎಂದು ಘೋಷಿಸಿದರು.
ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಇತ್ತೀಚೆಗೆ ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ ಅವರನ್ನು ಭೇಟಿ ಮಾಡಿದ್ದಾರೆ ಎನ್ನುವ ಸುದ್ದಿಯನ್ನು ಬಲವಾಗಿ ನಿರಾಕರಿಸಿದ ಗೌಡರು, ಎರಡೆರಡು ಬಾರಿ ಕುಮಾರಸ್ವಾಮಿಯವರೇ ನಿರಾಕರಿಸಿದ್ದಾರಲ್ಲ ಇನ್ನೇನು ಬೇಕು ಎಂದು ಮರುಪ್ರಶ್ನಿಸಿದರು. |