ಮಹಾರಾಷ್ಟ್ರ ಬುಡಕಟ್ಟು ವ್ಯವಹಾರಗಳ ಸಚಿವ ವಿಜಯ್ ವಾನ್ಡೆಟಿವಾರ್, ಬುಡಕಟ್ಟು ಮಹಿಳೆ ಮೇಲೆ ಹಲ್ಲೆ ನಡೆಸಿದ ಘಟನೆ ಸೋಮವಾರ ನಾಗಪುರ್ದಲ್ಲಿ ನಡೆದಿದೆ.
ಜಿಲ್ಲಾ ಕಾಂಗ್ರೆಸ್ ಮುಖಂಡೆಯಾಗಿರುವ ಬುಡಕಟ್ಟು ಮಹಿಳೆ ಸಚಿವರೊಡನೆ ಕೆಲವು ಸಮಸ್ಯೆಗಳು ಕುರಿತು ಮಾತುಕತೆ ನಡೆಸುತ್ತಿದ್ದ ಸಂದರ್ಭದಲ್ಲಿ ತಾಳ್ಮೆ ಕಳೆದುಕೊಂಡ ಸಚಿವ ವಿಜಯ್, ಅರ್ಜಿಗಳ ಬಂಡಲ್ ಅನ್ನು ಆಕೆಯ ಮುಖಕ್ಕೆ ಎಸೆದಿರುವ ಘಟನೆ ನಡೆದಿರುವುದಾಗಿ ವರದಿ ತಿಳಿಸಿದೆ. ಘಟನೆಯಿಂದ ಆಘಾತಗೊಂಡ ಮಹಿಳೆ ತಕ್ಷಣವೇ ಪ್ರಜ್ಞೆತಪ್ಪಿ ಬಿದ್ದಿದ್ದರು.
ಪ್ರಜ್ಞೆ ಕಳೆದುಕೊಂಡ ಮಹಿಳೆಯನ್ನು ಸ್ಥಳೀಯ ಆಸ್ಪತ್ರಗೆ ದಾಖಲಿಸಿ, ಚಿಕಿತ್ಸೆ ನೀಡಲಾಗಿದೆ. ಆಕೆಯ ಜೀವಕ್ಕೆ ಯಾವುದೇ ಅಪಾಯವಿಲ್ಲ ಚಿಕಿತ್ಸೆ ನೀಡಲಾಗಿದೆ ಎಂದು ಆಸ್ಪತ್ರೆಯ ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.
ಘಟನೆ ಕುರಿತಂತೆ ಸಚಿವರ ವಿರುದ್ಧ ಯಾವುದೇ ದೂರು ದಾಖಲಾಗಿಲ್ಲ, ಆದರೆ ತಾನು ಮಹಿಳೆ ಮೇಲೆ ಕೈ ಮಾಡಿಲ್ಲ ಎಂದು ಸಚಿವರು ಘಟನೆಯನ್ನು ಅಲ್ಲಗಳೆದಿದ್ದಾರೆ. |