ನವದೆಹಲಿ: ಒರಿಸ್ಸಾದಲ್ಲಿ ಹಳಿ ತಪ್ಪಿದ ಕೋರಮಂಡಲ್ ಎಕ್ಸ್‌ಪ್ರೆಸ್‌ನಿಂದಾಗಿ ಮೃತಪಟ್ಟವರ ಕುಟುಂಬಗಳಿಗೆ ತಲಾ ಐದು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ರೈಲ್ವೇ ಸಚಿವ ಲಾಲೂ ಪ್ರಸಾದ್ ಯಾದವ್ ಲೋಕಸಭೆಯಲ್ಲಿ ಪ್ರಕಟಿಸಿದ್ದಾರೆ. ಅಲ್ಲದೆ ಮೃತ ವ್ಯಕ್ತಿಗಳ ಬಂಧುವೊಬ್ಬರಿಗೆ ರೈಲ್ವೇ ಇಲಾಖೆಯಲ್ಲಿ ಉದ್ಯೋಗ ನೀಡಲಾಗುವುದು ಎಂದು ಅವರು ಘೋಷಿಸಿದ್ದಾರೆ. ಗಾಯಾಳುಗಳಿಗೆ 50 ಸಾವಿರ ಹಾಗೂ 10 ಸಾವಿರ ಪರಿಹಾರ ನೀಡಲಾಗುತ್ತದೆ. |