ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವ ಸಾಧ್ಯತೆಯನ್ನು ಮಾಜಿ ಉಪರಾಷ್ಟ್ರಪತಿ ಭೈರೋನ್ ಸಿಂಗ್ ಶೇಖಾವತ್ ತಳ್ಳಿಹಾಕಿದ್ದಾರೆ.
ಅವರು ಖಾಸಗಿ ಟಿವಿ ಚಾನೆಲ್‌ವೊಂದಕ್ಕೆ ನೀಡಿದ ಸಂದರ್ಶನದಲ್ಲಿ ತಿಳಿಸಿದ್ದು, ಆರೋಗ್ಯ ಸ್ಥಿತಿ ಉತ್ತಮವಾಗಿಲ್ಲದ ಕಾರಣ ತಾನು ಚುನಾವಣೆಗೆ ಸ್ಪರ್ಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಒಂದು ವೇಳೆ ಲೋಕಸಭಾ ಚುನಾವಣೆಗೆ ಸ್ಪರ್ಧಿಸುವುದು ಹೌದಾದರು ಕೂಡ ಅದು ತನ್ನ ಆರೋಗ್ಯ ಸ್ಥಿತಿಯ ಮೇಲೆ ಅವಲಂಬಿತವಾಗಿದೆ ಎಂಬೂದಾಗಿಯೂ ಹೇಳಿದ್ದಾರೆ.
ಭಾರತೀಯ ಜನತಾಪಕ್ಷದಲ್ಲಿ ಹಿರಿಯ ಮುಖಂಡ ಎಲ್.ಕೆ.ಆಡ್ವಾಣಿ ಅವರೊಬ್ಬರೆ ಪ್ರಧಾನಮಂತ್ರಿ ಅಭ್ಯರ್ಥಿಯಲ್ಲ, ತಾನು ಕೂಡ ಹುರಿಯಾಳಾಗಿದ್ದು, ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಿಕೆ ನೀಡುವ ಮೂಲಕ ಶೇಖಾವತ್ ವಿವಾದ ಹುಟ್ಟಿಸಿದ್ದರು. ಬಳಿಕ ತನ್ನ ಹೇಳಿಕೆಯನ್ನು ಬದಲಿಸಿದ್ದನ್ನು ಇಲ್ಲಿ ಸ್ಮರಿಸಿಕೊಳ್ಳಬಹುದು. |