ಕೇಂದ್ರದಲ್ಲಿ ಬಿಜೆಪಿ ಸರಕಾರ ಅಧಿಕಾರ ನಡೆಸಲು ಹಾಗೂ ಪ್ರಧಾನಿ ಸ್ಥಾನದ ಅಭ್ಯರ್ಥಿಯಾದ ಅಡ್ವಾಣಿಯವರಿಗೆ ಬೆಂಬಲಿಸುವುದಿಲ್ಲ ಎಂದು ಎನ್‌ಡಿಎ ಮೈತ್ರಿಕೂಟದ ತೆಲಗುದೇಶಂ ಪಕ್ಷದ ಅಧ್ಯಕ್ಷ ನಾರಾ ಚಂದ್ರಬಾಬು ನಾಯ್ಡು ಹೇಳಿದ್ದಾರೆ.
ಲೋಕಸಭೆಯ ಚುನಾವಣೆಯ ನಂತರ ಬಿಜೆಪಿ ಪ್ರಧಾನಿ ಅಭ್ಯರ್ಥಿಯಾಗಿ ಅಡ್ವಾಣಿಯವರನ್ನು ತೆಲಗುದೇಶಂ ಪಕ್ಷ ಬೆಂಬಲಿಸಲಿದೆಯೇ ಎಂದು ಸುದ್ದಿಗಾರರು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಾಯ್ಡು ಕೇಂದ್ರದಲ್ಲಿ ಬಿಜೆಪಿಗೆ ಬೆಂಬಲಿಸಲು ಸಾಧ್ಯವಿಲ್ಲ. ಬಿಜೆಪಿಯೊಂದಿಗೆ ನಮಗೆ ಯಾವುದೇ ಸಂಬಂಧವಿಲ್ಲ ಎಂದು ಸ್ಪಷ್ಟಪಡಿಸಿದರು.
ತೆಲಗುದೇಶಂ ಪಕ್ಷ ಚುನಾವಣಾ ಪೂರ್ವ ಅಥವಾ ನಂತರ ಬಿಜೆಪಿಯೊಂದಿಗೆ ಯಾವುದೇ ಹೊಂದಾಣಿಕೆಯನ್ನು ಮಾಡಿಕೊಳ್ಳುವುದಿಲ್ಲ ಎಂದು ತಿಳಿಸಿದ್ದಾರೆ.
ಬಿಜೆಪಿಯೊಂದಿಗೆ ಮೈತ್ರಿ ಹಾಗೂ ಗುಜರಾತ್ ಹಿಂಸಾಚಾರದ ಹಿನ್ನೆಲೆಯಲ್ಲಿ ಅಲ್ಪಸಂಖ್ಯಾತರು ತೆಲಗುದೇಶಂ ಪಕ್ಷವನ್ನು ತಿರಸ್ಕರಿಸಿದ್ದರಿಂದ 2004ರ ಲೋಕಸಭಾ ಚುನಾವಣೆಯಲ್ಲಿ ಭಾರಿ ಹಿನ್ನೆಡೆ ಸಾಧಿಸಿತ್ತು. |