ಎಡಪಕ್ಷಗಳು ಯುಪಿಎ ಮೈತ್ರ್ ಕೂಟದ ಶಾಶ್ವತ ಗೆಳೆಯರಾಗಿದ್ದು, ಮುಂಬರುವ ಲೋಕಸಭಾ ಚುನಾವಣೆಯನ್ನು ಜಂಟಿಯಾಗಿ ಎದುರಿಸಲಿವೆ ಎಂದು ರಾಷ್ಟ್ರೀಯ ಜನತಾ ದಳದ ಅದ್ಯಕ್ಷ ಲಾಲು ಪ್ರಸಾದ್ ಯಾದವ್ ಹೇಳಿದ್ದಾರೆ.
ಯುಪಿಎ ಮೈತ್ರಿ ಕೂಟದಲ್ಲಿ ಎಡಪಕ್ಷಗಳು ಶಾಶ್ವತ ಗೆಳೆಯರಾಗಿದ್ದು, ಗೆಳೆತನದಿಂದ ಕಾರ್ಯನಿರ್ವಹಿಸಲಿವೆ. ಆದ್ದರಿಂದ ಮುಂಬರುವ ಲೋಕಸಭೆ ಚುನಾವಣೆಯನ್ನು ಜಂಟಿಯಾಗಿ ಎದುರಿಸಿದಲ್ಲಿ ಯಾವುದೇ ಸಮಸ್ಯೆಗಳು ಉದ್ಭವಿಸುವುದಿಲ್ಲ ಎಂದು ತಿಳಿಸಿದ್ದಾರೆ.
ಕಳೆದ ವರ್ಷ ಭಾರತ -ಅಮೆರಿಕ ನಾಗರಿಕ ಪರಮಾಣು ಒಪ್ಪಂದ ಕುರಿತಂತೆ ಉಂಟಾದ ಭಿನ್ನಾಭಿಪ್ರಾಯದ ಹಿನ್ನೆಲೆಯಲ್ಲಿ ಎಡಪಕ್ಷಗಳು ಯುಪಿಎ ಸರಕಾರಕ್ಕೆ ನೀಡಿದ ಬೆಂಬಲವನ್ನು ಹಿಂತೆಗೆದುಕೊಂಡಿದ್ದವು.
ರಾಮವಿಲಾಸ್ ಪಾಸ್ವಾನ್ ನೇತೃತ್ವದ ಲೋಕಜನಶಕ್ತಿ ಪಕ್ಷದೊಂದಿಗೆ ಮಾತುಕತೆಗಳು ಮುಂದುವರಿದಿದ್ದು,ಲೋಕಜನಶಕ್ತಿ ಪಕ್ಷ ಯುಪಿಎ ಮೈತ್ರಿಕೂಟದಲ್ಲಿ ಪಾಲ್ಗೊಳ್ಳಲಿದೆ ಎನ್ನುವ ವಿಶ್ವಾಸ ವ್ಯಕ್ತಪಡಿಸಿದರು. |