ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ(ಏಮ್ಸ್) ಹೃದಯ ಬೈಪಾಸ್ ಶಸ್ತ್ರ ಚಿಕಿತ್ಸೆಗೆ ಒಳಗಾಗಿ ವಿಶ್ರಾಂತಿ ಪಡೆಯುತ್ತಿದ್ದ ಪ್ರಧಾನಿ ಡಾ.ಮನಮೋಹನ್ ಸಿಂಗ್ ಅವರ ಆರೋಗ್ಯ ತಪಾಸಣೆ ನಡೆಸಿದ ವೈದ್ಯರು, ಅವರು ಸಂಪೂರ್ಣವಾಗಿ ಆರೋಗ್ಯದಿಂದ ಇದ್ದು ಓಡಾಡಲು ಸಶಕ್ತರಾಗಿದ್ದಾರೆ ಎಂದು ಭಾನುವಾರ ತಿಳಿಸಿದ್ದಾರೆ.ಇಂದು ಏಮ್ಸ್‌ಗೆ ಆಗಮಿಸಿದ್ದ 76ರ ಹರೆಯದ ಪ್ರಧಾನಿಯವರ ಆರೋಗ್ಯ ತಪಾಸಣೆ ನಡೆಸಿದ ಬಳಿಕ ಏಮ್ಸ್ ಸೂಪರಿಟೆಂಡೆಂಟ್ ಡಾ.ಡಿ.ಕೆ.ಶರ್ಮಾ ಅವರು ಐಎಎನ್‌ಎಸ್ ಸುದ್ದಿಸಂಸ್ಥೆಯೊಂದಿಗೆ ಮಾತನಾಡುತ್ತ ವಿವರಣೆ ನೀಡಿದ್ದಾರೆ.ಅಖಿಲ ಭಾರತ ವೈದ್ಯ ವಿಜ್ಞಾನ ಸಂಸ್ಥೆಯಲ್ಲಿ(ಏಮ್ಸ್) ಫೆ.1ರಂದು ಹೃದಯ ಬೈಪಾಸ್ ಶಸ್ತ್ರ ಚಿಕಿತ್ಸೆಗೆ ಒಳಪಟ್ಟ ಪ್ರಧಾನಿ ಮನಮೋಹನ್ ಸಿಂಗ್ ಅವರ ಫೆ.8ರ ಭಾನುವಾರ ಬೆಳಿಗ್ಗೆ ಆಸ್ಪತ್ರೆಯಿಂದ ಡಿಸ್‌ಚಾರ್ಜ್ ಮಾಡಲಾಗಿತ್ತು. ಆದರೆ ಕೆಲವು ದಿನಗಳ ವಿಶ್ರಾಂತಿ ಅಗತ್ಯ ಎಂದು ವೈದ್ಯರು ಸೂಚಿಸಿದ್ದರು, ಆ ಹಿನ್ನೆಲೆಯಲ್ಲಿ ಪ್ರಧಾನಿಯವರು ಬಜೆಟ್ ಮಂಡನೆ, ಲೋಕಸಭೆ ಕಲಾಪಕ್ಕೆ ಗೈರು ಹಾಜರಾಗಿದ್ದರು.ಜನವರಿ 24ರಂದು ಪ್ರಧಾನಿ ಅವರಿಗೆ ಹೃದಯದ ಬೈಪಾಸ್ ಶಸ್ತ್ರಚಿಕಿತ್ಸೆ ನಡೆಸಲಾಗಿತ್ತು. ಜನವರಿ 28ರಂದು ತುರ್ತುನಿಗಾ ಘಟಕಕ್ಕೆ ಅವರನ್ನು ವರ್ಗಾಯಿಸಲಾಗಿತ್ತು. |