ಜೀಪೊಂದು ನದಿಗುರುಳಿ ಬಿದ್ದ ಪರಿಣಾಮ ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ಒಂಬತ್ತು ವಿದ್ಯಾರ್ಥಿಗಳು ಸಾವನ್ನಪ್ಪಿರುವ ದಾರುಣ ಘಟನೆ ಮಹಾರಾಷ್ಟ್ರದ ನಂದೂರ್‌ಬಾರ್ ಜಿಲ್ಲೆಯಲ್ಲಿ ಸೋಮವಾರ ಸಂಭವಿಸಿದೆ.
ನಸುಕಿನ ವೇಳೆ ಈ ಅಪಘಾತ ಸಂಭವಿಸಿದ್ದು, ಜೀಪಿನ ಚಾಲಕ ನಿಯಂತ್ರಣ ಕಳೆದುಕೊಂಡಿರುವುದೇ ಅಪಘಾತಕ್ಕೆ ಕಾರಣ ಎಂಬುದಾಗಿ ಪಿಎಸೈ ಆರ್.ಆರ್. ಬೋಟೆ ಹೇಳಿದ್ದಾರೆ.
ಜೀಪಿನಲ್ಲಿ ಪ್ರಯಾಣಿಸುತ್ತಿದ್ದ ನತದೃಷ್ಟ ವಿದ್ಯಾರ್ಥಿಗಳು ಧುಲೆ ಎಂಬಲ್ಲಿಗೆ ಕಂಪ್ಯೂಟರ್ ಪರೀಕ್ಷೆಗಾಗಿ ತೆರಳುತ್ತಿದ್ದರು. |