ಅಪರಾಧ ಪ್ರಕ್ರಿಯಾ ಸಂಹಿತೆಗೆ ತಿದ್ದುಪಡಿಯು ನಾಗರಿಕರ ಬವಣೆಯನ್ನು ತಪ್ಪಿಸುತ್ತದೆ ಎಂದು ಅಭಿಪ್ರಾಯಿಸಿರುವ ಸುಪ್ರೀಂ ಕೋರ್ಟ್, ಇದನ್ನು ವಿರೋಧಿಸುತ್ತಿರುವ ವಕೀಲರು ಈ ವಿಚಾರವನ್ನು ಅರ್ಥೈಸಿಕೊಳ್ಳಬೇಕು ಎಂದು ಹೇಳಿದೆ.
"ನಾವು ಅಪರಾಧಿ ಪ್ರಕ್ರಿಯಾ ಸಂಹಿತೆಯ ತಿದ್ದುಪಡಿಯನ್ನು ಎಚ್ಚರಿಕೆಯಿಂದ ಗಮನಿಸಿದ್ದು, ಅವರು (ಇದನ್ನು ವಿರೋಧಿಸುತ್ತಿರುವ ವಕೀಲರು) ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂಬುದಾಗಿ ಮುಖ್ಯ ನ್ಯಾಯಾಧೀಶ ಕೆ.ಜಿ. ಬಾಲಕೃಷ್ಣನ್ ಹಾಗೂ ನ್ಯಾಯಮೂರ್ತಿ ಪಿ. ಸದಾಶಿವನ್ ಅವರನ್ನೊಳಗೊಂಡ ನ್ಯಾಯಪೀಠ ಸೋಮವಾರ ಹೇಳಿದೆ.
ಈ ತಿದ್ದುಪಡಿಗೆ ರಾಷ್ಟ್ರಪತಿಯವರ ಅಂಗೀಕಾರ ದೊರೆತಿರುವ ಹಿನ್ನೆಲೆಯಲ್ಲಿ ಅಧಿಸೂಚನೆ ಕೋರಿ ಸಲ್ಲಿಸಲಾಗಿರುವ ಮನವಿಯೊಂದರ ವಿಚಾರಣೆ ವೇಳೆಗೆ ನ್ಯಾಯಾಲಯದ ಈ ಅಭಿಪ್ರಾಯ ಹೊರಬಿದ್ದಿದೆ. |