ಮಂಗಳವಾರ ನಸುಕಿಗೂ ಮುಂಚಿನ ಅವಧಿಯಲ್ಲಿ ಇಲ್ಲಿನ ಬಹುಬಜಾರಿನಲ್ಲಿ ಸಂಭವಿಸಿರುವ ರಸ್ತೆ ಅಪಘಾತದಲ್ಲಿ ಹತ್ತು ಮಂದಿ ಸಾವನ್ನಪ್ಪಿದ್ದು, ಇತರ ಹಲವಾರು ಮಂದಿ ಗಾಯಗೊಂಡಿದ್ದಾರೆ.
ಈ ನತದೃಷ್ಟರು ಪ್ರಯಾಣಿಸುತ್ತಿದ್ದ ಬಸ್ಸು ಟ್ರಕ್ಕರ್‌ಗೆ ಮುಖಾಮುಖಿ ಢಿಕ್ಕಿಯಾದ ಪರಿಣಾಮ ಅಪಘಾತ ಸಂಭವಿಸಿರುವುದಾಗಿ ಪೊಲೀಸ್ ವರಿಷ್ಠಾಧಿಕಾರಿ ರಿಚರ್ಡ್ ಲಕ್ರ ಹೇಳಿದ್ದಾರೆ.
ಗಾಯಾಳುಗಳನ್ನು ವಿವಿಧ ಆಸ್ಪತ್ರೆಗೆ ದಾಖಲಿಸಲಾಗಿದೆ. ಇವರಲ್ಲಿ ಕೆಲವರ ಪರಿಸ್ಥಿತಿ ಗಂಭೀರವಾಗಿದೆ ಎಂದು ವರದಿ ತಿಳಿಸಿದೆ. |